ರಾಜಕೀಯ

ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ: ಬಿಜೆಪಿ ನಾಯಕರ ಬಂಧನ

Views: 30

 

ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜವನ್ನು ಇಳಿಸಿರುವುದನ್ನು ಖಂಡಿಸಿ ಬೆಂಗಳೂರಿನಲ್ಲಿ ಬಿಜೆಪಿ ನಾಯಕರುಗಳು ಬೃಹತ್ ಪ್ರತಿಭಟನಾ ಧರಣಿ ನಡೆಸಿದ್ದು, ಪ್ರತಿಭಟನಾ ನಿರತರವನ್ನು ಪೊಲೀಸರು ಬಂಧಿಸಿದರು.

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿಂದು ಬಿಜೆಪಿ ವತಿಯಿಂದ ಕೆರಗೋಡುವಿನಲ್ಲಿ ಹನುಮ ಧ್ವಜ ಕೆಳಗಿಳಿಸಿ ಹರಿದಿರುವುದನ್ನು ಖಂಡಿಸಿ ಮತ್ತು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವುದನ್ನು ವಿರೋಧಿಸಿ ಬಿಜೆಪಿ ವತಿಯಿಂದ ನಡೆದ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ನಾಯಕರು ಹಾಗೂ ಕಾರ್ಯಕರ್ತರು ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಕೆರಗೋಡಿನಲ್ಲಿ ಹನುಮ ಧ್ವಜ ಇಳಿಸಿರುವುದು ಖಂಡನೀಯ. ಹಾಗೆಯೇ ರಾಷ್ಟ್ರಧ್ವಜಕ್ಕೂ ಅಪಮಾನ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರದ ಈ ನಿಲುವನ್ನು ವಿರೋಧಿಸುತ್ತೇವೆ. ಸರ್ಕಾರಕ್ಕೆ ಧಿಕ್ಕಾರ, ಜೈಶ್ರೀರಾಮ್, ಜೈಹನುಮಾನ್ ಘೋಷಣೆಗಳನ್ನು ಪ್ರತಿಭಟನಾ ನಿರತರು ಹಾಕಿದರು.

ಪ್ರತಿಭಟನಾ ನಿರತರನ್ನು ಪೊಲೀಸರು ಬಂಧಿಸಿದರು.

ಈ ಪ್ರತಿಭಟನೆಯಲ್ಲಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿಗೌಡ, ದಕ್ಷಿಣ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಸಿ.ಕೆ. ರಾಮಮೂರ್ತಿ ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

Related Articles

Back to top button