ಜನಮನ

ಬೆಂಗಳೂರು:ಬಾರಿ ಮಳೆಗೆ ಕುಸಿದ ನಿರ್ಮಾಣ ಹಂತದ ಕಟ್ಟಡ;ಅವಶೇಷಗಳಡಿ ಕಾರ್ಮಿಕರು ಸಿಲುಕಿರುವ ಶಂಕೆ!

Views: 92

ಬೆಂಗಳೂರು: ರಾಜಧಾನಿಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಅವಾಂತರದ ಸರಮಾಲೆಯೇ ಸೃಷ್ಟಿಯಾಗಿದೆ. ಯಲಹಂಕ, ಮಲ್ಲೇಶ್ವರ, ಸಿಲ್ಕ್ ಬೋರ್ಡ್ ಸೇರಿದಂತೆ ನಾನಾ ಕಡೆಗಳಲ್ಲಿ ಮಳೆ ನೀರು ರಸ್ತೆಗಳಲ್ಲಿ ತುಂಬಿಕೊಂಡರೆ ಇನ್ನೂ‌ ಕೆಲವು ಕಡೆಗಳಲ್ಲಿ ಮನೆಯಿಂದ ಆಚೆ ಬರಲಾಗದಷ್ಟು ಜಲಾವೃತವಾಗಿದೆ. ಇದರ ಬೆನ್ನಲ್ಲೇ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದ್ದು ರಕ್ಷಣಾ ಕಾರ್ಯಾಚರಣೆ ನಡೆದಿದೆ.

ಧರಾಶಾಹಿವಾಗಿರುವ ಕಟ್ಟಡದ ಅವಶೇಷಗಳಡಿ ಸುಮಾರು 10ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಹೆಣ್ಣೂರು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸುತ್ತಿದ್ದಾರೆ.

ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೋರ್ವ ಹೊರಬಂದು ಘಟನೆಯ ಭೀಕರತೆ ಬಿಚ್ಚಿಟ್ಟಿದ್ದಾನೆ. ತಲೆಯಲ್ಲಿ ರಕ್ತಸಿಕ್ತಗಾಯದಿಂದ ಹೊರಬಂದು ಕಟ್ಟಡದಲ್ಲಿ ನಮ್ಮವರು ಒಳಗೆ ಸಿಲುಕಿದ್ದಾರೆಂದು ಕಣ್ಣೀರು ಹಾಕಿದ್ದಾನೆ. ಸ್ಥಳಕ್ಕೆ ಆಂಬ್ಯುಲೆನ್ಸ್ ದೌಡಾಯಿಸಿವೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

 

Related Articles

Back to top button