ರಾಜಕೀಯ

ಬೆಂಗಳೂರು ಉತ್ತರದಲ್ಲಿ ‘ಗೋ ಬ್ಯಾಕ್ ಶೋಭಕ್ಕಾ’ ಬೀದಿಗಿಳಿದ ಬಿಜೆಪಿ ಕಾರ್ಯಕರ್ತರು

Views: 62

ಲೋಕಸಭೆ ಚುನಾವಣೆಗೆ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಿರುವುದಕ್ಕೆ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಿನ್ನೆ ಸಂಜೆ ಶೋಭಾ ಕರಂದ್ಲಾಜೆ ಅವರನ್ನು ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಿಸುತ್ತಿದ್ದಂತೆ ‘ಗೋ ಬ್ಯಾಕ್ ಶೋಭಕ್ಕಾ’ ಎಂಬ ಭಿತ್ತಿ ಪತ್ರಗಳನ್ನು ಹಿಡಿದು ಬೀದಿಗಿಳಿದ ಬಿಜೆಪಿ ಕಾರ್ಯಕರ್ತರು ಯಾವುದೇ ಕಾರಣಕ್ಕೂ ನಮ್ಮ ಕ್ಷೇತ್ರಕ್ಕೆ ಶೋಭಾ ಕರಂದ್ಲಾಜೆ ಅಭ್ಯರ್ಥಿಯಾಗಿ ಬರೋದು ಬೇಡ ಎಂದಿದ್ದಾರೆ.

ಸ್ಥಳೀಯ ಒಕ್ಕಲಿಗರ ನಾಯಕರಲ್ಲಿ ಯಾರಿಗಾದರು ಟಿಕೆಟ್ ಕೊಡಿ. ಇಲ್ಲಾ ಹಾಲಿ ಸಂಸದ ಸದಾನಂದಗೌಡ ಅವರನ್ನೇ ಮತ್ತೊಮ್ಮೆ ಕಣಕ್ಕಿಳಿಸಿ. ಆದರೆ, ದಯವಿಟ್ಟು ಶೋಭಾ ಕರಂದ್ಲಾಜೆ ಮಾತ್ರ ಬೇಡ ಎಂದು ಹೇಳಿದ್ದಾರೆ.

 

 

Related Articles

Back to top button