ಇತರೆ

ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತ: ಇಬ್ಬರು ಮೃತ್ಯು

Views: 0

ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ, ಲಾರಿಯ ಹಿಂಬದಿಗೆ ಒಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಾರಿನಲ್ಲಿದ್ದ ರಾಜೇಶ್(42), ಉಮಾ(35) ಮೃತ ದುರ್ದೈವಿಗಳು.

ಮಕ್ಕಳು ಸೇರಿದಂತೆ ನಾಲ್ವರಿಗೆ ಗಾಯಗಳಾಗಿದ್ದು, ರಾಮನಗರ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಬೆಂಗಳೂರಿನಿಂದ ಮೈಸೂರು ಕಡೆ ಹೋಗುತ್ತಿತ್ತು. ಏಳು ಜನರಿಂದ ಓಮಿನಿ ಕಾರು ಮೈಸೂರು ಕಡೆ ಪ್ರಯಾಣ ಮಾಡುತ್ತಿತ್ತು. ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ಓವರ್ ಟೇಕ್ ಮಾಡಲು ಹೋಗಿ ಒಮಿನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಒಮಿನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

Related Articles

Back to top button