ಇತರೆ
ಬೆಳಗಾವಿ: ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ಮೂವರ ಸಾವು

Views: 36
ಬೆಳಗಾವಿ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ವ್ಯಕ್ತಿ ಹಾಗೂ ಆತನ ಇಬ್ಬರು ಮಕ್ಕಳು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ನಡೆದಿದೆ.
ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಕಲ್ಲಪ್ಪ ಗಾಣಿಗೇರ (36) ಮಕ್ಕಳಾದ ಮನೋಜ ಕಲ್ಲಪ್ಪ ಗಾಣಿಗೇರ (11) ಹಾಗೂ ಮದನ ಕಲ್ಲಪ್ಪ ಗಾಣಿಗೇರ (9) ಮೃತ ದುರ್ದೈವಿಗಳು.
ವೃತ್ತಿಯಲ್ಲಿ ಸರ್ಕಾರಿ ಶಿಕ್ಷಕರಾಗಿದ್ದ ಕಲ್ಲಪ್ಪ ಗಾಣಿಗೇರ ನಿಡಗುಂದಿ ಗ್ರಾಮದ ಹುಕ್ಕೇರಿ ತೋಟದ ಮಗದುಮ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಭಾನುವಾರ ಮಧ್ಯಾಹ್ನ ತೋಟದಲ್ಲಿ ನಿರ್ಮಿಸಿದ ಕೃಷಿ ಹೊಂಡದಲ್ಲಿ ಈಜಲು ಹೋದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.