ಕರಾವಳಿ

ಬೆಳ್ತಂಗಡಿ ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ: ಮೂವರು ಸಾವು

ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪ ಕುಕ್ಕೇಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಡುಮದ್ದು ತಯಾರಿಕಾ ಘಟಕದಲ್ಲಿ ಭಾನುವಾರ ನಡೆದ ಸ್ಫೋಟದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Views: 22

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪ ಕುಕ್ಕೇಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಡುಮದ್ದು ತಯಾರಿಕಾ ಘಟಕದಲ್ಲಿ ಭಾನುವಾರ ನಡೆದ ಸ್ಫೋಟದಲ್ಲಿ ಮೂವರು ಸಾವನಪ್ಪಿ ದೇಹ  ಛಿದ್ರಗೊಂಡಿದೆ.

ತ್ರಿಶೂರಿನ ವರ್ಗೀಸ್, ಹಾಸನದ ಚೇತನ್, ಕೇರಳದ ಸ್ವಾಮಿ ಮೃತಪಟ್ಟಿದ್ದಾರೆ.

ಕುಕ್ಕೇಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡ್ತ್ಯಾರು ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಸಮೀಪ ಸುಡುಮದ್ದು ತಯಾರಿಕಾ ಘಟಕದಲ್ಲಿ ಸಂಜೆ 5 ಗಂಟೆಗೆ ಸ್ಫೋಟ ಸಂಭವಿಸಿದೆ.

ಪಟಾಕಿ ತಯಾರಿಸುತ್ತಿದ್ದ ಘಟಕ ಕುಚ್ಚೋಡಿ ಸಮೀಪದ ನಿವಾಸಿ ಬಶೀರ್ ಎಂಬವರ ಜಮೀನಿನಲ್ಲಿ ಪಟಾಕಿ ತಯಾರಿಸುತ್ತಿದ್ದರು. ಇಲ್ಲಿ ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದರು. ಈ ಪೈಕಿ ತ್ರಿಶೂರಿನ ವರ್ಗೀಸ್, ಹಾಸನದ ಚೇತನ್, ಕೇರಳದ ಸ್ವಾಮಿ ಮೃತಪಟ್ಟಿದ್ದಾರೆ.ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ ಚಿಕ್ಕಮಾರಹಳ್ಳಿ, ಪ್ರೇಮ್ ಕೇರಳ, ಕೇಶವ ಕೇರಳ ಕೆಲಸ ನಿರ್ವಹಿಸುತ್ತಿದ್ದರು.

ಮೃತಪಟ್ಟ ಮೂವರು ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟಕ ತಯಾರಿಸುತ್ತಿದ್ದರು. ಈ ಪೈಕಿ ಓರ್ವನ ಮೃತದೇಹ ದೊರೆತಿದ್ದು, ಇನ್ನಿಬ್ಬರ ದೇಹ ಸ್ಫೋಟದ ಸುತ್ತ ನೂರು ಮೀಟರ್ ವ್ಯಾಪ್ತಿಯಲ್ಲಿ ಛಿದ್ರವಾಗಿ ಬಿದ್ದಿದೆ. ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ಸಿಬಂದಿ ತಕ್ಷಣ ಬೆಂಕಿ ನಂದಿಸಿ ಅರೆ ಜೀವಾವಸ್ಥೆಯಲ್ಲಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದರೂ. ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

 

Related Articles

Back to top button