ಇತರೆ
ಬೈಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ:ಸವಾರ ಸ್ಥಳದಲ್ಲೇ ಸಾವು
Views: 117
ಕನ್ನಡ ಕರಾವಳಿ ಸುದ್ದಿ: ವೇಗವಾಗಿ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ
ಮೃತಪಟ್ಟವರು ಆತ್ರಾಡಿ ನಿವಾಸಿ ಸನಾತ್ ಎಂದು ತಿಳಿದು ಬಂದಿದೆ.
ಅಪಘಾತದ ಮಾಹಿತಿ ತಿಳಿದ ತಕ್ಷಣ ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸವಾರನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ವೇಗ ಮತ್ತು ರಸ್ತೆಯ ಪರಿಸ್ಥಿತಿ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.
ಈ ಸಂಬಂಧ ಉಡುಪಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.






