ಇತರೆ

ಬ್ರಹ್ಮಾವರ ಕಸ ವಿಲೇವಾರಿ ಮಾಡುವ ಎಸ್.ಎಲ್.ಆರ್.ಎಮ್ ಘಟಕಕ್ಕೆ ಆಕಸ್ಮಿಕ ಬೆಂಕಿ ಅಪಾರ ನಾಶ

Views: 101

ಕನ್ನಡ ಕರಾವಳಿ ಸುದ್ದಿ: ಬ್ರಹ್ಮಾವರ ಮೀನು ಮಾರುಕಟ್ಟೆ ಸಮೀಪದಲ್ಲಿರುವ ಕಸ ವಿಲೇವಾರಿ ಮಾಡುವ ಎಸ್.ಎಲ್.ಆರ್.ಎಮ್ ಘಟಕ ಆಕಸ್ಮಿಕ ಬೆಂಕಿ ಹೊತ್ತಿಕೊಂಡು ಅಪಾರ ನಾಶ ಉಂಟಾಗಿದೆ.

ಬೆಂಕಿ ನಂದಿಸಲು ಅಗ್ನಿಶಾಮಕ ದಳ ಎಷ್ಟೇ ಪ್ರಯತ್ನ ಪಟ್ಟರೂ ಎಸ್.ಎಲ್.ಆರ್.ಎಮ್ ಸಂಪೂರ್ಣ ಸುಟ್ಟು ಕರಕಲಾಗಿದೆ.

ಮಧ್ಯರಾತ್ರಿ ಹೊತ್ತಿಕೊಂಡ ಬೆಂಕಿಯಿಂದಾಗಿ ಘಟಕದ ಒಳಗೆ ನಿಲ್ಲಿಸಿದ ಮೂರು ಟಾಟ ಯೇಸ್ ಗಾಡಿಗಳು, ಒಂದು ಪಿಕಪ್, ಲಕ್ಷಾಂತರ ಮೌಲ್ಯದ ವಿಂಗಡಿಸಿದ ಕಸ, ಎರಡು ಬೇಲಿಂಗ್ ಮೆಶಿನ್, ಒಂದು ಬರ್ನಿಂಗ್ ಮೆಶಿನ್ , 6 ಸಿಸಿ ಕೆಮರಾಗಳು, ಕಚೇರಿ ಫೈಲ್ ಗಳು, ಪುಸ್ತಕಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಸಮೀಪದ ಗುಜರಿ ಅಂಗಡಿಗೂ ಬೆಂಕಿ ತಗುಲಿದ್ದು ಅಲ್ಲಿಯೂ  ಹಾನಿ ಸಂಭವಿಸಿದೆ.

ಉಡುಪಿ, ಕುಂದಾಪುರ, ಮಲ್ಪೆ ಮೂರು ಕಡೆಗಳ ಅಗ್ನಿಶಾಮಕ ವಾಹನಗಳನ್ನು ಬೆಂಕಿ ನಂದಿಸುವ ಕಾರ್ಯಕ್ಕೆ ಬಳಸಿಕೊಳ್ಳಲಾಯಿತು. ಬೆಂಕಿ ನಂದಿಸುವ ಕಾರ್ಯ ಬೆಳಗಿನವರೆಗೂ ಮುಂದುವರೆದಿದೆ.

Related Articles

Back to top button