ಜನಮನ
ಬ್ರಹ್ಮಾವರ ಟಿಪ್ಪರ್ ಡಿಕ್ಕಿ: ಸ್ಕೂಟರ್ ಸವಾರೆ ಸಾವು

Views: 176
ಕನ್ನಡ ಕರಾವಳಿ ಸುದ್ದಿ: ಬ್ರಹ್ಮಾವರ ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರ ಮಾಬುಕಳ ಸೇತುವೆ ಸಮೀಪ ನಡೆದ ಭೀಕರ ಅಪಘಾತದಲ್ಲಿ ಮಹಿಳೆ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.
ಮಮ್ತಾಜ್ (44) ಮೃತರು. ಗುರುವಾರ ಸಂಜೆ ಮಾಬುಕಳ ಸೇತುವೆ ಸಮೀಪ ಸ್ಕೂಟರ್ ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಮಹಿಳೆಯ ಗಂಭೀರ ಗಾಯಗಳಾಗಿದ್ದು ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಹ ಸವಾರೆ ಬಾರ್ಕೂರು ಮೂಲದ ಪೂರ್ಣಿಮಾ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ನಡೆದ ತಕ್ಷಣ ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.