ಕರಾವಳಿ

ಭಟ್ಕಳದ ಶಿರಾಲಿಯಲ್ಲಿ ಕಪ್ಪೆ ಚಿಪ್ಪು ಸಂಗ್ರಹಕ್ಕೆ ನದಿಗೆ ತೆರಳಿದ್ದ 8 ಮಂದಿ ಜಲಸಮಾಧಿ 

Views: 366

ಕನ್ನಡ ಕರಾವಳಿ ಸುದ್ದಿ: ಕಪ್ಪೆ ಚಿಪ್ಪು ಸಂಗ್ರಹಿಸಲು ವೆಂಕಟಾಪುರ ನದಿಗೆ ತೆರಳಿದ್ದ ವೇಳೆ ದಿಢೀರ್ ನೀರು ಏರಿಕೆಯಾಗಿ ಸಂಭವಿಸಿದ ದುರ್ಘಟನೆಯಲ್ಲಿ 8 ಜನರು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿ ತಟ್ಟಿ ಹಕ್ಕಲು ಪ್ರದೇಶದಲ್ಲಿ ಭಾನುವಾರ ನಡೆದಿದೆ.

ಲಕ್ಷ್ಮಿ ಮಹಾದೇವ ನಾಯ್ಕ (42), ಪಡುಶಿರಾಲಿ ಬೆಂಗ್ರೆ, ಉಮೇಶ ನಾಯ್ಕ (30), ಶಾರದಾಹೊಳೆ, ಲಕ್ಷ್ಮಿ ನಾಯ್ಕ (30), ಶಾರದಾಹೊಳೆ, ಲಕ್ಷ್ಮಿ ಅಣ್ಣಪ್ಪ ನಾಯ್ಕ (60), ಲಕ್ಷ್ಮಿ ಶಿವರಾಮ ನಾಯ್ಕ (49), ಜ್ಯೋತಿ ನಾಗಪ್ಪ ನಾಯ್ಕ (34), ಮಾಲತಿ ನಾಯ್ಕ (38) ಮಾಸ್ತಮ್ಮ ನಾಯ್ಕ ಮೃತಪಟ್ಟಿದ್ದಾರೆ.

ಈ ಭೀಕರ ಜಲ ದುರಂತದಲ್ಲಿ ನಾಗರತ್ನಾ ಮತ್ತು ಮಹಾದೇವಿ ಎಂಬ ಇಬ್ಬರು ಮಹಿಳೆಯರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯ ವಿವರ: ಒಟ್ಟು 14 ಜನರ ತಂಡವು ಕಪ್ಪೆ ಚಿಪ್ಪುಗಳನ್ನು ಸಂಗ್ರಹಿಸಲು ವೆಂಕಟಾಪುರ ನದಿಗೆ ತೆರಳಿತ್ತು. ಈ ವೇಳೆ ನದಿಯಲ್ಲಿ ನೀರಿನ ಮಟ್ಟ ದಿಢೀರನೆ ಏರಿಕೆಯಾದ ಕಾರಣ, ಜನರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.ಒಟ್ಟು 8 ಮಂದಿಯಲ್ಲಿ 7 ಜನ ಮಹಿಳೆಯರು ಮತ್ತು ಓರ್ವ ಪುರುಷ ಎಂದು ತಿಳಿದು ಬಂದಿದೆ.

ಮೂವರು ಮಹಿಳೆಯರು ಪ್ರಾಣಾಪಾಯದಿಂದ ಪಾರಾಗಿದ್ದು, ಅವರನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಬ್ಬರು ಸೇರಿದಂತೆ ಒಟ್ಟು ನಾಲ್ವರನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಭಟ್ಕಳ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಭಟ್ಕಳ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ತೀವ್ರಗೊಳಿಸಲಾಗಿದೆ. ಈ ಕುರಿತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!