ಇತರೆ
ಭಾರೀ ಮಳೆಯಿಂದ ಶಿರಾಡಿ ಘಾಟ್ ರಸ್ತೆಯಲ್ಲಿ ಭೂಕುಸಿತ:ಸಂಚಾರಕ್ಕೆ ಅಡ್ಡಿ

Views: 84
ಕನ್ನಡ ಕರಾವಳಿ ಸುದ್ದಿ: ಭಾರೀ ಮಳೆಯಿಂದಾಗಿ ಶಿರಾಡಿ ಘಾಟ್ ರಸ್ತೆಯಲ್ಲಿ ಎರಡು ಕಡೆ ಭೂ ಕುಸಿತ ಉಂಟಾಗಿದೆ. ಬೆಂಗಳೂರು -ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ರಸ್ತೆಗೆ ಮಣ್ಣು ಕುಸಿಯುತ್ತಿದೆ.
ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ ಸಕಲೇಶಪುರ ತಾಲೂಕಿನ ದೋಣಿಗಾಲ್ ಮತ್ತು ಅಡ್ಡನಗುಡ್ಡದ ಬಳಿ ಶಿರಾಡಿ ಘಾಟ್ ರಸ್ತೆಯಲ್ಲಿ ಎರಡು ಕಡೆ ಭೂ ಕುಸಿತ ಉಂಟಾಗಿದೆ. ತಡೆಗೋಡೆ ನಿರ್ಮಿಸಿದ್ದರೂ ಕೂಡ ರಸ್ತೆ ಮೇಲೆ ಮಣ್ಣು ಕುಸಿದಿದ್ದು, ಮಣ್ಣಿನ ಸಮೇತ ಮರಗಳು ನೆಲಕ್ಕೆ ಉರುಳುತ್ತಿವೆ.
ವೀಕೆಂಡ್ ಹಿನ್ನೆಲೆ ಶಿರಾಡಿಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಳವಾಗಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.