ಕರಾವಳಿ

ಭಾರೀ ಮಳೆ: ಇಂದು ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

Views: 108

ಕನ್ನಡ ಕರಾವಳಿ ಸುದ್ದಿ: ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಆಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 12 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಆದೇಶ ನೀಡಿದ್ದಾರೆ

ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ

ಕರಾವಳಿ ಭಾಗದಲ್ಲಿ ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಜೂ.12 ರಿಂದ 15ರವರೆಗೆ ಭಾರತೀಯ ಹವಾಮಾನ ಇಲಾಖೆಯು ‘ರೆಡ್ ಅಲರ್ಟ್’ ಘೋಷಿಸಲಾಗಿದೆ.

ದ.ಕ., ಉಡುಪಿ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ತುಸು ಕ್ಷೀಣಿಸಿದ್ದ ಮುಂಗಾರು ಸದ್ಯ ಚುರುಕು ಪಡೆಯುವ ಲಕ್ಷಣವಿದ್ದು, ಮುನ್ನೆಚ್ಚರಿಕೆ ನೀಡಲಾಗಿದೆ. ಈ ಅವಧಿಯಲ್ಲಿ ಕೆಲವೆಡೆ 204.5 ಮಿ.ಮೀ.ಗೂ ಅಧಿಕ ಮಳೆ ಸುರಿಯುವ ಸಾಧ್ಯತೆ ಇದೆ. ಗುಡುಗು, ಗಾಳಿ ಸಹಿತ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಸಾಧ್ಯತೆ ಇದೆ.

Related Articles

Back to top button