ಶಿಕ್ಷಣ

ಭಾರೀ ಮಳೆ ಹಿನ್ನಲೆ: ನಾಳೆ ಉಡುಪಿ ಜಿಲ್ಲೆಯ  ಶಾಲೆಗಳಿಗೆ ರಜೆ ಘೋಷಣೆ

Views: 174

ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜೂ.13ರಂದು ಶುಕ್ರವಾರ ಉಡುಪಿ ಜಿಲ್ಲೆಯ ಎಲ್ಲಾ ಆಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ.

ಪದವಿ ಪೂರ್ವ ಕಾಲೇಜು, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಐಟಿಐಗಳಿಗೆ ಈ ರಜೆ ಅನ್ವಯಿಸುವುದಿಲ್ಲ

ಜಿಲ್ಲೆಯ ಎಲ್ಲಾ ಸರಕಾರಿ, ಅನುದಾನಿತ ಶಾಲೆ ಹಾಗೂ ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯಿಸಲಿದೆ. ಜಿಲ್ಲೆಯಲ್ಲಿ, ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

Related Articles

Back to top button
error: Content is protected !!