ಭೀಕರ ಅಪಘಾತ :ಟ್ರಕ್ ಆಟೋಗೆ ಡಿಕ್ಕಿ 9 ಮಂದಿ ಸಾವು

Views: 57
ವೇಗವಾಗಿ ಬಂದ ಟ್ರಕ್ ಸಿಎನ್‌ಜಿ ಆಟೋ ಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ೯ ಮಂದಿ ಸ್ಥಳದಲ್ಲೇ ಮೃತಪಟ್ಟು,ಐವರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಇಂದು ಬೆಳಗಿನ ಜಾವ ಬಿಹಾರದ ಲಾಖಿಸರಾಯ್ ಜಿಲ್ಲೆಯಲ್ಲಿ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ಪೊಲೀಸರು ಸ್ಥಳೀಯರ ನೆರವಿನೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು,ಅವರಲ್ಲಿ ಮೂವರು ಸ್ಥಿತಿ ಚಿಂತಾಜನಕವಾಗಿದೆ.
ಲಾಖಿಸರಾಯ್ ಜಿಲ್ಲೆಯ ರಾಮಗಢ ಪೊಲೀಸ್ ಠಾಣೆ ವ್ಯಾಪ್ತಿಯ ಜುಲೋನಾ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 30ರ ಬಳಿ ಮುಂಜಾನೆ ಪ್ರಯಾಣಿಕರನ್ನು ತುಂಬಿಕೊಂಡು ಹೋಗುತ್ತಿದ್ದ ಸಿಎನ್‌ಜಿ ಆಟೋ ಗೆ ಟ್ರಕ್ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಆಟೋದಲ್ಲಿದ್ದ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಉಳಿದ ಐವರು ಗಾಯಗೊಂಡಿದ್ದಾರೆ.ನನ್ನ ಸಂಬಂಧಿಯಾದ ಮನೋಜ್ ಕುಮಾರ್ ಆಟೋ ಚಾಲಕನಾಗಿದ್ದು, ಆತ ಹಲ್ಸಿಯಿಂದ ಲಾಖಿಸರಾಯ್‌ಗೆ ಕೆಲ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ. ಜುಲೋನಾ ಗ್ರಾಮದ ಬಳಿ ವೇಗವಾಗಿ ಚಲಿಸುತ್ತಿದ್ದ ಟ್ರಕ್ ಆಟೋಗೆ ಡಿಕ್ಕಿಯಾಗಿದೆ.
ಡಿಕ್ಕಿಯ ತೀವ್ರತೆಗೆ ಆಟೋ ನಜ್ಜುಗುಜ್ಜಾಗಿದ್ದು, 9 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ” ಎಂದು ಆಟೋ ಚಾಲಕನ ಸಂಬಂಧಿ ಅನಿಲ್ ಮಿಸ್ರಿ ಎಂಬುವರು ಮಾಹಿತಿ ನೀಡಿದ್ದಾರೆ.
ಗಾಯಗೊಂಡಿರುವ 5 ಜನರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಪಟನಾ ಆಸ್ಪತ್ರೆಗೆ ದಾಖಲಿಸಲಾಗಿದೆ ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಡೆಪ್ಯುಟಿ ಸೂಪರಿಂಟೆಂಡೆಂಟ್ ಅಮಿತ್ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಪಘಾತದ ಬಳಿಕ ಟ್ರಕ್ ಚಾಲಕನು ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಗುರಲಗುಂಜಿ ರಸ್ತೆಯಲ್ಲಿ ಜೀಪ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ರಾಮಲಿಂಗ್ ಮುತ್ಗೇಕರ್ (20) ಹನುಮಂತ ಪಾಟೀಲ್ (2೦) ಮೃತ ಯುವಕರು ಎಂದು ಗುರುತಿಸಲಾಗಿತ್ತು. ನಂದಿಹಾಳ ಗ್ರಾಮಕ್ಕೆ ಸೈನಿಕ ತರಬೇತಿ ಪಡೆಯಲು ಈ ಯುವಕರು ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಮೃತ ಯುವಕರಿಬ್ಬರೂ ಬೇಕ್ವಾಡ ಗ್ರಾಮದ ನಿವಾಸಿಗಳಾಗಿದ್ದಾರೆ.