ಇತರೆ
ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು

Views: 166
ಕನ್ನಡ ಕರಾವಳಿ ಸುದ್ದಿ: ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾದ ಘಟನೆ ನಡೆದಿದೆ.
ನಗರದ ಹೊರವಲಯದ ನೂಲ್ವಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು ಮೃತರನ್ನು ಹುಬ್ಬಳ್ಳಿಯ ಲಿಂಗರಾಜ ನಗರದ ನಿವಾಸಿಗಳು ಎನ್ನಲಾಗಿದೆ. ಕಾರಿನಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೂ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ. ಹುಬ್ಬಳ್ಳಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.