ಇತರೆ
ಭೀಕರ ರಸ್ತೆ ಅಪಘಾತ ಮೂವರು ಸಾವು: ಒರ್ವ ಗಂಭೀರ

Views: 0
ನಿಂತಿದ್ದ ಟ್ರಾಕ್ಟರಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಇಂದು ಮುಂಜಾನೆ ಮೈಸೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಿರಿಯಾ ಪಟ್ಟಣದ ಬಳಿ ಕಂಪ್ಲಾಪುರದಲ್ಲಿ ನಡೆದಿದೆ.
ಮೃತರನ್ನು ಮುದಾಸಿರ್, ಮುಜಾಹಿದ್ ಮತ್ತು ಅಹ್ಮದ್ ಬಾಷ ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಮುಜಾಸಿರ್ ಎಂಬುವರು ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ .
ಇಂದು ಮುಂಜಾನೆ 4.30 ರ ಸುಮಾರಿಗೆ ನಡೆದ ಅಪಘಾತದಲ್ಲಿ ಕಾರಿನಲ್ಲಿ ಇದ್ದವರು ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವಾಗ ಕಂಪ್ಲಾಪುರ ಬಳಿ ಈ ಭೀಕರ ಅಪಘಾತ ನಡೆದಿದೆ.
ಘಟನಾ ಸ್ಥಳಕ್ಕೆ ಪಿರಿಯಾಪಟ್ಟಣದ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.