ಇತರೆ
ಮಂಗಳೂರು: ಅಕ್ರಮವಾಗಿ ನಡೆಸುತ್ತಿದ್ದ ಹುಕ್ಕಾ ಬಾರ್ ಮೇಲೆ ದಾಳಿ

Views: 56
ಕನ್ನಡ ಕರಾವಳಿ ಸುದ್ದಿ: ಮಂಗಳೂರು ಕಂಕನಾಡಿಯಲ್ಲಿರುವ ಪ್ರಸಿದ್ಧ ಮಾಲ್ ನ ಪಾರ್ಕಿಂಗ್ ನಲ್ಲಿರುವ ಕೊಠಡಿಯೊಂದರಲ್ಲಿ ನಡೆಸುತ್ತಿದ್ದ ಅಕ್ರಮ ಹುಕ್ಕಾ ಬಾರ್ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಸಿದ್ದಿಕ್ ಅಲಿಯಾಸ್ ಎಂ ಎಫ್ ಸಿ ಸಿದ್ದಿಕ್, ಅಬ್ದುಲ್ ನಾಸೀರ್, ಸಫ್ಘಾನ್ ಹುಕ್ಕಾ ಬಾರ್ ನಡೆಸುತ್ತಿದ್ದ ಆರೋಪಿಗಳು. 2023-24 ಇಸವಿಯಲ್ಲಿ ಕೆಫೆಟೇರಿಯಾ ನಡೆಸಲು ಮಂಗಳೂರು ಮಹಾನಗರ ಪಾಲಿಕೆಯಿಂದ ಉದ್ದಿಮೆ ಪರವಾನಿಗೆ ಪಡೆದಿದ್ದ ಇವರು ಕೆಫೆಟೇರಿಯಾ ನಡೆಸುವ ನೆಪದಲ್ಲಿ ಅಕ್ರಮ ಹುಕ್ಕಾ ಬಾರ್ ನಡೆಸುತ್ತಿದ್ದರು ಎನ್ನಲಾಗಿದೆ.
ಹುಕ್ಕಾ ಬಾರ್ ನಿಂದ ಹುಕ್ಕಾ ಸೇದುವ ಉಪಕರಣಗಳು, ತಂಬಾಕು ಉತ್ಪನ್ನಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.