ಇತರೆ
ಮಂಗಳೂರು: ಡೆತ್ ನೋಟ್ ಬರೆದಿಟ್ಟು ಖಾಸಗಿ ಕಂಪನಿಯ ಯುವತಿ ಆತ್ಮಹತ್ಯೆ

Views: 140
ಮಂಗಳೂರು ಖಾಸಗಿ ಕಂಪೆನಿಯಲ್ಲಿ ಉದ್ಯೋಗ ನಿರ್ವಹಿಸುತ್ತಿರುವ ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ಅವಿವಾಹಿತ ಯುವತಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ಮೃತರನ್ನು ಕಾಯರ್ತಡ್ಕ ಕುರುಂಬುಡೇಲು ನಿವಾಸಿ ವನಿತಾ ಯಾನೆ ರೇವತಿ(30) ಎಂದು ಗುರುತಿಸಲಾಗಿದೆ.
ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ವನಿತಾ ಅನಾರೋಗ್ಯದ ಕಾರಣಕ್ಕೆ ಕೆಲವು ದಿನಗಳ ಹಿಂದೆ ಮನೆಗೆ ಬಂದಿದ್ದರು. ಮನೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಯುವತಿ ಬರೆದಿಟ್ಟಿದ್ದ ಡೆತ್ ನೋಟ್ ಸಿಕ್ಕಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.