ಕರಾವಳಿ
ಮಂಗಳೂರು ನವವಿವಾಹಿತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ

Views: 107
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನವವಿವಾಹಿತೆಯೊಬ್ಬರು ನೇಣು ಬಿಗಿದು ಪತಿ ಮನೆಯಲ್ಲಿ ಆತ್ಯಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಕುರಿಯ ಗಡಾಜೆ ಎಂಬಲ್ಲಿ ಸಂಭವಿಸಿದೆ.
ಆತ್ಮಹತ್ಯೆಗೆ ಶರಣಾದವರು ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮ್ಮಣ್ಣ ಗೌಡ ಮತ್ತು ಪುಷ್ಪ ದಂಪತಿ ಪುತ್ರಿ ಶೋಭಾ (26) ಎಂದು ತಿಳಿದು ಬಂದಿದೆ.
ಶೋಭಾ ಅವರನ್ನು ಕಳೆದ ಒಂದೂವರೆ ತಿಂಗಳ ಹಿಂದೆ ಪುತ್ತೂರು ಕುರಿಯ ಗಡಾಜೆ ರೋಹಿತ್ ರವರಿಗೆ ಮದುವೆ ಮಾಡಿ ಕೊಡಲಾಗಿತ್ತು. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾವಿಗೆ ಕಾರಣ ತನಿಖೆಯಿಂದ ತಿಳಿಯಬೇಕಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.