ಇತರೆ
ಮಂಗಳೂರು -ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ :ನಾಲ್ವರ ಸಾವು

Views: 0
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇನ್ನೋವಾ ಕಾರು ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟು ,ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಹಾಸನ ತಾಲೂಕು ಕುಪ್ಪಳ್ಳಿ ಗ್ರಾಮದ ಚೇತನ್, ಅಶೋಕ್, ಪುರುಷೋತ್ತಮ ,ಆಲೂರು ತಾಲೂಕಿನ ದಿನೇಶ್ ಮೃತಪಟ್ಟವರು.
ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಹಾಸನ ಕಡೆಗೆ ಬರುತ್ತಿದ್ದ ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ.