ಕರಾವಳಿ

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಪೊಲೀಸರಿಂದ ಗುಂಡೇಟು

Views: 326

ಕನ್ನಡ ಕರಾವಳಿ ಸುದ್ದಿ: ಕೋಟೆಕಾರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಯೊಬ್ಬನಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಮಂಗಳವಾರ ನಡೆದಿದೆ.

ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ ಮುಂಬೈ ಚೆಂಬೂರು ತಿಲಕ್ ನಗರ ನಿವಾಸಿ ಕಣ್ಣನ್ ಮಣಿ ಎಂಬಾತನ ಮೇಲೆ ಮಂಗಳೂರು ಸಿಟಿ ಕ್ರೈಂ ಬ್ರ್ಯಾಂಚ್ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕರ್ನಾಟಕ ಕೇರಳ ಗಡಿಯ ತಲಪಾಡಿ ಗ್ರಾಮದ ಕಾಟುಂಗರ ಗುಡ್ಡೆ ಬಳಿ ಈ ಘಟನೆ ನಡೆದಿದೆ.

ಸ್ಥಳ ಮಹಜರು ಮಾಡುವ ವೇಳೆ ತಪ್ಪಿಸಿಕೊಳ್ಳುವ ಕಣ್ಣನ್ ಮಣಿ ಯತ್ನ ನಡೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ನಿನ್ನೆ ತಮಿಳುನಾಡಿನ ತಿರುವನ್ನೇಲಿ ಪದ್ಮನೇರಿ ಗ್ರಾಮವೊಂದರಲ್ಲಿ ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದರು. ಆರೋಪಿಗಳನ್ನು ಮಂಗಳೂರಿಗೆ ಕರೆ ತರಲಾಗುತ್ತಾ ಇತ್ತು. ಕರ್ನಾಟಕ- ಕೇರಳ ಗಡಿ ಭಾಗದ ತಲಪಾಡಿಯ ಅಲಂಕಾರು ಗುಡ್ಡದಲ್ಲಿ ಈ ಘಟನೆ ನಡೆದಿದೆ. ದರೋಡೆಯ ಪ್ರಮುಖ ಆರೋಪಿ ಕಣ್ಣನ್ ಮಣಿ ಅವರನ್ನು ದೇರಳಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

 

Related Articles

Back to top button