ಇತರೆ
ಮಂಗಳೂರು: ಮನೆಯ ಎರಡನೇ ಮಹಡಿ ಪೈಂಟ್ ಮಾಡುತ್ತಿದ್ದ ಯುವಕ ಜಾರಿ ಬಿದ್ದು ಸಾವು

Views: 56
ಮಂಗಳೂರು, ಶಕ್ತಿನಗರದಲ್ಲಿ ಮನೆಯೊಂದರ ಎರಡನೇ ಮಹಡಿಯಲ್ಲಿ ಪೈಂಟಿಂಗ್ ಮಾಡುತ್ತಿದ್ದ ಯುವಕ ಏಣಿಯಿಂದ ಆಯತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಕುಡುಪು ಕೊಂಚಾಡಿ ನಿವಾಸಿ ಮೋಹಿತ್ ಪೂಜಾರಿ(26) ಮೃತ ಯುವಕ.
ಮೋಹಿತ್ ಪೂಜಾರಿ ಅವರು ಮಂಗಳೂರಿನ ಶಿವ ಎಂಡ್ ಡೆಕೋರೇಟರ್ಸ್ ಮಾಲಕ ಚಂದ್ರಶೇಖರ್ ಅವರ ಮನೆಯಲ್ಲಿ 15 ದಿನಗಳಿಂದ ಪೈಂಟಿಂಗ್ ಕೆಲಸ ಮಾಡುತ್ತಿದ್ದರು.ಮೋಹಿತ್ ಮತ್ತು ದೀಪಕ್ ಎರಡನೇ ಮಹಡಿಯಲ್ಲಿ ಹೊರಭಾಗದ ಗೋಡೆಗೆ ಪೈಂಟ್ ಮಾಡುತ್ತಿದ್ದಾಗ ಏಣಿ ಜಾರಿ ಹೊರಕ್ಕೆ ಬಿದ್ದಿದೆ. ಮೋಹಿತ್ ಹೊರಭಾಗದ ರಸ್ತೆಗೆ ಎಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಘಟನೆ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.