ಶಿಕ್ಷಣ
ಮಂಗಳೂರು ವಿವಿಗೆ ಎಬಿವಿಪಿ ಮುತ್ತಿಗೆ, ಕುಲಪತಿ ರಾಜೀನಾಮೆಗೆ ಆಗ್ರಹ

Views: 42
ಮಂಗಳೂರು: ಕೋಚಿಮುಲ್ ನೇಮಕಾತಿ ಹಗರಣ ಮತ್ತು ಮಂಗಳೂರು ವಿವಿ ಮೇಲೆ ನಡೆದ ಇಡಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾನಿಲಯದ ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಸಿದರು.
ವಿವಿಯ ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಿದ ಎಬಿವಿಬಿ ಸದಸ್ಯರು ಪರಿಕ್ಷಾಂಗ ಕುಲಸಚಿವರ ಅಮಾನತಿಗೆ ಹಾಗೂ ಮಂಗಳೂರು ವಿವಿ ಕುಲಪತಿ ರಾಜೀನಾಮೆಗೆ ಆಗ್ರಹಿಸಿದರು.
ಪರೀಕ್ಷಾ ಪೂರ್ವದಲ್ಲೇ ಕೋಚಿಮುಲ್ ನೇಮಕಾತಿ ಪರೀಕ್ಷೆ ಪ್ರಶ್ನಾ ಪತ್ರಿಕೆ ಸೋರಿಕೆ ಆರೋಪ ಬಂದಿದ್ದು, ಮಂಗಳೂರು ವಿವಿ ಅಧಿಕಾರಿಗಳಿಂದ ಪ್ರಶ್ನೆಪತ್ರಿಕೆ ಮಾರಾಟ ಶಂಕೆ ವ್ಯಕ್ತವಾದ ಬೆನ್ನಲ್ಲೇ ಮಂಗಳೂರು ವಿವಿಗೆ ಇ.ಡಿ ಅಧಿಕಾರಿಗಳ ತಂಡ ದಾಳಿ ಮಾಡಿತ್ತು. ಕೂಡಲೇ ತಪ್ಪಿತಸ್ಥ ಆರೋಪಿಗಳನ್ನು ಅಮಾನತುಗೊಳಿಸಿ ಕ್ರಮಗೊಳ್ಳಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಬಿವಿಪಿ ಮುಖಂಡರು ಎಚ್ಚರಿಸಿದರು.