ರಾಜಕೀಯ

ಮಂಗಳೂರು: ಸಿಎಂ ಸಿದ್ದರಾಮಯ್ಯರಿಗೆ ಘೇರಾವ್, ಕಪ್ಪು ಬಾವುಟ ಪ್ರದರ್ಶನ    

Views: 49

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಿಂದ ಅಡ್ಯಾರ್‌ಗೆ ತೆರಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ‌ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಗರದ ಬೋಂದೇಲ್‌ನಲ್ಲಿ ನಡೆದಿದ್ದು, ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಗರದ ಅಡ್ಯಾರ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬರುವಾಗ ಈ ಘಟನೆ ನಡೆದಿದೆ.

ಇತ್ತೀಚೆಗ ನಗರದ ಸೈಂಟ್ ಜೆರೋಸಾ ಶಾಲೆಯಲ್ಲಿ ನಡೆದ ವಿವಾದದ ಬಳಿಕ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಮತ್ತಿತರ ಮೇಲೆ ದಾಖಲಾದ ಎಫ್‌ಐಆರ್‌ನ್ನು ಖಂಡಿಸಿ ಈ ಪ್ರತಿಭಟನೆ ನಡೆಸಲಾಗಿದೆ ಎಂದು  ತಿಳಿಯಲಾಗಿದೆ.

Related Articles

Back to top button