ಯುವಜನ
ಮಂಗಳೂರು: ಹೊಸ ಟ್ರೆಂಡ್‌ನ ಪ್ಯಾಂಟ್ ಧರಿಸಿದ ಯುವಕನಿಗೆ ಸ್ನೇಹಿತರಿಂದ ಅವಮಾನ: ಆತ್ಮಹತ್ಯೆಗೆ ಯತ್ನಿಸಿದ ಯುವಕ

Views: 117
ಕನ್ನಡ ಕರಾವಳಿ ಸುದ್ದಿ: ಹೊಸ ಟ್ರೆಂಡ್‌ನ ಟೋರ್ನ್ ಪ್ಯಾಂಟ್ ಧರಿಸಿದ ಯುವಕನಿಗೆ ಸ್ನೇಹಿತರಿಂದ ಅವಮಾನಕ್ಕೆ ನೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಜಿಲ್ಲೆ ಬೆಳ್ತಂಗಡಿಯ ಮಾರುಕಟ್ಟೆಗೆ ವಿನೂತನ ಶೈಲಿಯ ಟೋರ್ನ್ ಜೀನ್ಸ್ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಿದ್ದ ಯುವಕನಿಗೆ ಮೂವರು ಸ್ನೇಹಿತರು ಸೇರಿ ಎರಡು ಕೈಗಳನ್ನು ಲಾಕ್ ಮಾಡಿ ಪ್ಯಾಂಟ್‌ಗೆ ಗೋಣಿಚೀಲದ ಸೂಜಿಯಿಂದ ಹೊಲಿದು ಅದರ ವಿಡಿಯೋ ಮಾಡಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ, ಆ ವಿಡಿಯೋ ವೈರಲ್ ಆಗಿದ್ದು. ಇದರಿಂದ ಮನನೊಂದ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್ (21) ಆತ್ಮಹತ್ಯೆಗೆ ಯತ್ನಿಸಿದ ಯುವಕ, ಮನನೊಂದ ಶಾಹಿಲ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಶಾಹಿಲ್ ಜೀವನ್ಮರಣ ಹೋರಾಟ ನಡೆಸಿದ್ದಾನೆ.