ರಾಜಕೀಯ

ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರಾ ಮಾಜಿ ಸಂಸದೆ? ಸುಮಲತಾ ಮನೆಗೆ ದಿಢೀರ್ ಭೇಟಿ ನೀಡಿದ ಬಿ.ವೈ ವಿಜಯೇಂದ್ರ

Views: 55

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ನಿರ್ಧಾರ ಆಗಿದೆ. ಈ ಟಿಕೆಟ್ ಸಸ್ಪೆನ್ಸ್‌ ಮುಗಿಯುತ್ತಿದ್ದಂತೆ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಭೇಟಿ ಕೊಟ್ಟಿದ್ದು ಕೂತೂಹಲ ಕೆರಳಿಸಿದೆ.

ಜೆ.ಪಿ ನಗರದ ಸುಮಲತಾ ಅಂಬರೀಶ್ ಅವರ ಮನೆಗೆ ಬಿ.ವೈ ವಿಜಯೇಂದ್ರ ಅವರು ಭೇಟಿ ಮಾಡಿದ್ದು, ಮಹತ್ವದ ಚರ್ಚೆ ನಡೆಸಿದ್ದಾರೆ. ಮಂಡ್ಯ ಮೈತ್ರಿ ಅಭ್ಯರ್ಥಿ ನಾನೇ ಎಂದು ಹೇಳುತ್ತಿದ್ದ ಸಂಸದೆ ಸುಮಲತಾ ಅವರು ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದರು. ಮೈತ್ರಿ ಹೊಂದಾಣಿಕೆಯಲ್ಲಿ ಜೆಡಿಎಸ್ ಪಾಲಾದ ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಣಕ್ಕಿಳಿಸಲು ತೀವ್ರ ಕಸರತ್ತು ನಡೆಸಿದ್ದರು.

ದೆಹಲಿಯಿಂದ ವಾಪಸ್ ಆದ ಬಳಿಕ ಸುಮಲತಾ ಅಂಬರೀಶ್ ಅವರು ನಾಳೆ ಬೆಂಬಲಿಗರ ಸಭೆ ಕರೆದು ಮುಂದಿನ ನಿಲುವಿನ ಬಗ್ಗೆ ತೀರ್ಮಾನ ಕೈಗೊಳ್ಳಲು ಮುಂದಾಗಿದ್ದಾರೆ. ಬೆಂಬಲಿಗರ ಸಭೆ ಬಳಿಕ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರಾ ಅಥವಾ ಬಿಜೆಪಿ ಪಕ್ಷದಿಂದ ಉನ್ನತ ಹುದ್ದೆಗೆ ಒಪ್ಪಿಕೊಳ್ತಾರಾ ಅನ್ನೋ ಚರ್ಚೆ ನಡೆಯುತ್ತಿದೆ.

ಅಸಮಾಧಾನಗೊಂಡಿದ್ದ ಸುಮಲತಾ ಅವರನ್ನು ಬಿ.ವೈ ವಿಜಯೇಂದ್ರ ಅವರನ್ನು ಭೇಟಿ ಮಾಡಿದ್ದಾರೆ. ಮಂಡ್ಯ ಟಿಕೆಟ್ ವಿಚಾರದಲ್ಲಿ ಸುಮಲತಾ ಅವರ ಮನವೊಲಿಕೆಗೆ ಬಿ.ವೈ ವಿಜಯೇಂದ್ರ ಅವರು ಪ್ರಯತ್ನಿಸಿದ್ದಾರೆ.

ದೆಹಲಿಗೆ ತೆರಳಿದ್ದ ಸುಮಲತಾ ಅಂಬರೀಶ್ ಅವರು ನರೇಂದ್ರ ಮೋದಿ, ಅಮಿತ್ ​​ಶಾ, ಜೆಪಿ ನಡ್ಡಾ ಅವರನ್ನು ಭೇಟಿಯಾಗಿದ್ದರು. ನಾನಾ ಪ್ರಯತ್ನ ಮಾಡಿದ್ರೂ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಸುಮಲತಾ ಅವರು ಅಸಮಾಧಾನಗೊಂಡಿದ್ದಾರೆ. ಇನ್ನು, ಇಂದು ಅಧಿಕೃತವಾಗಿ ಮಂಡ್ಯ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ. ಮಂಡ್ಯ ಟಿಕೆಟ್ ಘೋಷಣೆ ಬೆನ್ನಲ್ಲೇ ಸುಮಲತಾ ಅವರ ಮನೆಗೆ ಬಿವೈ ವಿಜಯೇಂದ್ರ ಭೇಟಿ ಕೊಟ್ಟು ಅಸಮಾಧಾನ ಶಮನಕ್ಕೆ ಪ್ರಯತ್ನಿಸಿದ್ದಾರೆ.

Related Articles

Back to top button