ರಾಜಕೀಯ
ಮಂಡ್ಯ ಲೋಕಸಭಾ ಕ್ಷೇತ್ರ: ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ‘ಕುಮಾರಣ್ಣ’ ವಿಜಯೇಂದ್ರ ಅಧಿಕೃತ ಘೋಷಣೆ

Views: 40
ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕುಮಾರಣ್ಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಘೋಷಣೆ ಮಾಡಿದ್ದಾರೆ. ಈ ಮೂಲಕ ಮಂಡ್ಯ ಲೋಕಸಭೆ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ.
ಬಿಜೆಪಿ-ಜೆಡಿಎಸ್ ನಾಯಕರ ಸಭೆ ಬಳಿಕ ಮಾತನಾಡಿರುವ ಬಿ.ವೈ.ವಿಜಯೇಂದ್ರ,ಜನರಿಗಾಗಿ ಪ್ರಾಣ ಮುಡಿಪಾಗಿಡುವ ಜನನಾಯಕ ಕುಮಾರಣ್ಣ ಸಂಸದರಾಗಬೇಕು. ರಾಜ್ಯದ 28 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಲಿದ್ದಾರೆ. ಎರಡು ಪಕ್ಷದ ಕಾರ್ಯಕರ್ತರು ಒಗ್ಗಟ್ಟಾಗಿದ್ದಾರೆ. ಕಾಂಗ್ರೆಸ್ ಪಕ್ಷ ದೂಳಿಪಟ ಮಾಡುವ ಕೆಲಸ ಮಾಡ್ತಾರೆ. ಕುಮಾರಸ್ವಾಮಿ, ದೇವೇಗೌಡರು ರಾಜ್ಯ ಪ್ರವಾಸ ಮಾಡುತ್ತಾರೆ. ಚುನಾವಣೆಯನ್ನು ಚುನಾವಣೆ ರೀತಿ ಮಾಡೋಣ ಮೈಮರೆಯುವುದು ಬೇಡ. ರಾಜ್ಯದ ಮೊದಲ ಫಲಿತಾಂಶ ಮಂಡ್ಯದ್ದಾಗಿರಬೇಕು. ಕುಮಾರಸ್ವಾಮಿ ಅತಿ ಹೆಚ್ಚು ಅಂತರದಿಂದ ಗೆಲ್ಲಬೇಕು ಎಂದು ಕರೆ ನೀಡಿದರು.