ಶಿಕ್ಷಣ

ಮಂತ್ರಾಲಯ ಮಠದ “ಶ್ರೀ ಪರಿಮಳ ಪ್ರಶಸ್ತಿ”ಗೆ ಹೆಮ್ಮಾಡಿ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ರೂವಾರಿ ಗಣೇಶ ಮೊಗವೀರ ಆಯ್ಕೆ 

Views: 49

ಕನ್ನಡ ಕರಾವಳಿ ಸುದ್ದಿ:DCX ಸಿಸ್ಟಮ್ಸ್ ಲಿಮಿಟೆಡ್ ಅರ್ಪಿಸುವ ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲ ಮಹಾಸಂಸ್ಥಾನ, ಶ್ರೀರಾಘವೇಂದ್ರ ಸ್ವಾಮಿಗಳವರ ಮಠ, ಮಂತ್ರಾಲಯದ ಪರಮ ಪೂಜ್ಯ ಪೀಠಾದಿಪತಿಗಳಾದ ಡಾ| ಪರಮಪೂಜ್ಯ ಶ್ರೀ ಶ್ರೀ ಶ್ರೀ 108 ಶ್ರೀಮತ್ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಕೊಡಮಾಡುವ ಪ್ರತಿಷ್ಠಿತ “ಶ್ರೀ ಪರಿಮಳ ಪ್ರಶಸ್ತಿ 2025” ಈ ಪ್ರಶಸ್ತಿಗೆ ಹೆಮ್ಮಾಡಿ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ರೂವಾರಿ,ಶಿಕ್ಷಣ ಕ್ಷೇತ್ರದ ಕನಸುಗಾರರಾದ ಶ್ರೀ ಗಣೇಶ್ ಮೊಗವೀರರವರನ್ನು ಆಯ್ಕೆ ಮಾಡಲಾಗಿದ್ದು, ಇದುವರೆಗೆ ಶ್ರೀಯುತರು ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಕೊಡುಗೆಗಳನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಮಾರ್ಚ್ 7 ರಂದು ಮಂತ್ರಾಲಯದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಆಯ್ಕೆ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button