ಇತರೆ

ಮಗು ಆಟವಾಡುತ್ತಾ ತೋಟದಲ್ಲಿದ್ದ ಕೆರೆಗೆ ಕಾಲು ಜಾರಿ ಬಿದ್ದು ಸಾವು

Views: 34

ಬೆಳ್ತಂಗಡಿ: ಮನೆಯಲ್ಲಿಯೇ ಇದ್ದ ಮಗು ಆಟವಾಡುತ್ತಾ  ಹತ್ತಿರದ ತೋಟದಲ್ಲಿದ್ದ ಕೆರೆ ಬಳಿ ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದೆ.

ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕನ್ನಾಜೆ ನಿವಾಸಿ ರೋಷನ್ ಡಿಸೋಜಾ ಮತ್ತು ಉಷಾ ಡಿಸೋಜಾ ದಂಪತಿಗಳ ಒಬ್ಬನೇ ಮಗ ರೇಯನ್ ಡಿಸೋಜಾ(1ವರ್ಷ 11 ತಿಂಗಳು) ಜ.22 ರಂದು ಬೆಳ್ತಂಗಡಿ ಮನೆಯ ತೋಟದಲ್ಲಿರುವ ಕೆರೆಗೆ ಬಿದ್ದು ಸಾವನ್ನಪ್ಪಿದೆ.

ತಕ್ಷಣ ಮನೆಯವರು ಮತ್ತು ಸ್ಥಳೀಯರ ಸಹಕಾರದಲ್ಲಿ ಕೆರೆಯಿಂದ ಮೇಲಕ್ಕೆ ಎತ್ತಿ ಲಾಯಿಲ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಯಿತು.ಪರೀಕ್ಷಿಸಿದ ವೈದ್ಯರು ಮಗು ಸಾವನ್ನಪ್ಪಿದೆ ಎಂದು ತಿಳಿಸಿದರು. ಬೆಳ್ತಂಗಡಿ ಪೊಲೀಸರು  ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

Related Articles

Back to top button