ಕರಾವಳಿ
ಮಣಿಪಾಲ: ಬಸ್‌ನ ಎದುರು ನಿಂತಿದ್ದ ಮಾಲಕ ಚಕ್ರಕ್ಕೆ ಸಿಲುಕಿ ಸಾವು

Views: 168
ಉಡುಪಿ: ಮಣಿಪಾಲ ಬಡಗಬೆಟ್ಟುವಿನ ಗ್ಯಾರೇಜ್ ನಲ್ಲಿ ಚಕ್ರಕ್ಕೆ ಸಿಲುಕಿ ಬಸ್ ಮಾಲಕ ಸಾವನ್ನಪ್ಪಿದ ಘಟನೆ ಬುಧವಾರ ಸಂಭವಿಸಿದೆ.
ಬಸ್ ಮಾಲಕ ದಯಾನಂದ ಶೆಟ್ಟಿ (65) ಮೃತಪಟ್ಟವರು. ಇವರು ತಮ್ಮ ಬಸ್ ಅನ್ನು ಗ್ಯಾರೇಜ್‌ನಲ್ಲಿ ರಿಪೇರಿಗೆ ಇಟ್ಟಿದ್ದನ್ನು ನೋಡಲು ಬಂದಿದ್ದರು. ಈ ವೇಳೆ ಬಸ್‌ನ ಎದುರು ನಿಂತಿದ್ದ ವೇಳೆ ಚಾಲಕ ಬಸ್ ಚಲಾಯಿಸಿದ ಪರಿಣಾಮ ಅವರು ಮುಂಭಾಗದ ಚಕ್ರಕ್ಕೆ ಸಿಲುಕಿ ಗಂಭೀರ ಗಾಯಗೊಂಡಿದ್ದರು.ಕೂಡಲೇ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಹೆಚ್ಚಿನ ಚಿಕಿತ್ಸೆ ನೀಡಲಾಯಿತು. ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
.