ಗೋ ಹತ್ಯೆ ನಿಷೇಧ ಕಾಯ್ದೆ ರದ್ದು ಪ್ರಸ್ತಾವ: ಸಾಧು ಸಂತರ ಹೋರಾಟದ ಎಚ್ಚರಿಕೆ

Views: 1
ಗೋ ಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸಬಾರದೆಂದು ದಕ್ಷಿಣ ಕನ್ನಡ ಜಿಲ್ಲೆಯ ಸಾಧು ಸಂತರು ಸರ್ಕಾರವನ್ನು ಅಗ್ರಹಿಸಿದ್ದಾರೆ.
ಮಂಗಳೂರಿನಲ್ಲಿ ನಡೆದ ಸಾಧುಸಂತರ ಸಮಾವೇಶದಲ್ಲಿ ಈ ಕಾಯ್ದೆಯನ್ನು ರದ್ದು ಗೊಳಿಸಿದರೆ ಸಮಾಜದ ಸಾಮರಸ್ಯಕ್ಕೆ ತೊಂದರೆ ಉಂಟಾಗಲಿದೆ ಸರಕಾರದ ವಿರುದ್ಧ ಸಾಧು ಸಂತರು ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಒಡೆಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಸಮಾವೇಶದ ಬಳಿಕ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ರದ್ದುಗೊಳಿಸುವ ಪ್ರಸ್ತಾವ ಮಾಡಿದ್ದು, ಅದನ್ನು ಪ್ರಬಲವಾಗಿ ವಿರೋಧಿಸುತ್ತೇವೆ. ಗೋವುಗಳಿಗೆ ಎಷ್ಟೇ ವಯಸ್ಸಾದರೂ ಹತ್ಯೆಗೆ ಅವಕಾಶ ನೀಡಬಾರದು ಎಂದು ಅಗ್ರಹಿಸಿದರು.
ಒಡೆಯೂರು ಶ್ರೀ ಮಾಣಿಲದ ಮೋಹನ್ ದಾಸ್ ಪರಮಹಂಸ ಸ್ವಾಮೀಜಿ, ಕೆಮಾರಿನ ಶ್ರೀ ಈಶ ವಿಠಲ ದಾಸ ಸ್ವಾಮೀಜಿ, ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ, ಚಿತ್ರಾಪುರದ ಶ್ರೀ ವಿದ್ಯೇಂದ್ರ ತೀರ್ಥ ಸ್ವಾಮೀಜಿ, ಚೆಲಿಂಬಿ ಓಂಶ್ರೀ ಮಠದ ವಿದ್ಯಾನಂದ ಸರಸ್ವತಿ ಸ್ವಾಮೀಜಿ, ವಿಶ್ವ ಹಿಂದೂ ಪರಿಷತ್ತಿನ ಮುಖಂಡ ಪ್ರೊ. ಎಂ.ಬಿ ಪುರಾಣಿಕ್, ಆರ್ ಎಸ್ ಎಸ್. ಪ್ರಾಂತ ಸಹ ಕಾರ್ಯವಾಹ ಪ್ರಕಾಶ್ ವಿ. ಎಸ್ ಉಪಸ್ಥಿತರಿದ್ದರು.