ಇತರೆ

ಮದರ್ ತೆರೆಸಾ ಶಿಕ್ಷಣ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

Views: 24

ಕನ್ನಡ ಕರಾವಳಿ ಸುದ್ದಿ: ಮಾದಕ ವ್ಯಸನಗಳಿಂದ ಮುಕ್ತವಾದ ಸ್ವಚ್ಛ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿ ಯುವ ಜನಾಂಗದ ಪಾತ್ರ ಮಹತ್ತರವಾದದ್ದು ಈ ನಿಟ್ಟಿನಲ್ಲಿ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ ಜೂನ್ 26ರಂದು ಅಂತರಾಷ್ಟ್ರೀಯ ಮಾದಕ ವಿರೋಧಿ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಭಾರತದ ಮುಂದಿನ ಪ್ರಜೆಗಳಾದ ವಿದ್ಯಾರ್ಥಿಗಳಲ್ಲಿ ವಿದ್ಯಾರ್ಥಿ ದೆಸೆಯಿಂದಲೇ ಮಾದಕ ವಸ್ತುಗಳ ಬಗ್ಗೆ ಅರಿವು ಹೊಂದಿದ್ದರೆ ಅವರು ತಮ್ಮ ಭವಿಷ್ಯವನ್ನು ಸುರಕ್ಷಿತಗೊಳಿಸಿಕೊಳ್ಳಬಹುದು. ಎಂಬ ನಿಟ್ಟಿನಲ್ಲಿ ಮಾದಕ ವಸ್ತುಗಳ ಬಳಕೆಯಿಂದ ದೂರವಿರುವಂತೆ ಮತ್ತು ತಮ್ಮ ಸುತ್ತಮುತ್ತಲಿನವರನ್ನು ದೂರವಿಡುವಂತೆ ಜಾಗೃತಿ ಮೂಡಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಮಮತಾ ಪೂಜಾರಿ ಇವರು ಪ್ರಮಾಣವಚನ ಭೋಧಿಸುವ ಮೂಲಕ “ನಶಾ ಮುಕ್ತ ಭಾರತ” ಅಭಿಯಾನದಲ್ಲಿ ಕೈಜೋಡಿಸುವಂತೆ ಪ್ರೇರೆಪಿಸಿದರು. ಕಾರ್ಯಕ್ರಮದಲ್ಲಿ ಮದರ್ ತೆರೇಸಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಪ್ರಾಂಶುಪಾಲರಾದ ಜೈಸನ್ ಲೂಯಿಸ್, ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕರೆಲ್ಲರೂ ಉಪಸ್ಥಿತರಿದ್ದು ಪ್ರಮಾಣವಚನ ಸ್ವೀಕರಿಸಿದರು.

 

Related Articles

Back to top button