ಜನಮನ

ಮದುವೆಯಾಗಿ 6 ತಿಂಗಳಲ್ಲೇ ನವ ವಿವಾಹಿತೆ ಅನುಮಾನಾಸ್ಪದ ಸಾವು 

Views: 102

ಕನ್ನಡ ಕರಾವಳಿ ಸುದ್ದಿ: ಮದುವೆಯಾಗಿ 6 ತಿಂಗಳಲ್ಲೇ ನವವಿವಾಹಿತೆ ಸಾವನ್ನಪ್ಪಿರುವ ಘಟನೆ ಅರಸೀಕೆರೆ ನಗರದಲ್ಲಿ ನಡೆದಿದೆ.

ಚನ್ನಗಿರಿ ತಾಲೂಕಿನ ಸೋಮಲಾಪುರ ಗ್ರಾಮದ ವಿದ್ಯಾ (24) ಮೃತಪಟ್ಟ ದುರ್ದೈವಿ.

ವಿದ್ಯಾ ಮೃತದೇಹ ಅರಸೀಕೆರೆ ನಗರದ ರೈಲ್ವೆ ಟ್ರ್ಯಾಕ್ ಬಳಿ ಪತ್ತೆಯಾಗಿದೆ. ದಾವಣಗೆರೆ ಜಿಲ್ಲೆಯ ಅಣಜಿ ಗ್ರಾಮದ ವಿದ್ಯಾ ಹಾಗೂ ಸೋಮಲಾಪುರ ಗ್ರಾಮದ ಶಿವು ಆರು ತಿಂಗಳ ಹಿಂದೆ ಮದುವೆಯಾಗಿದ್ದರು. ಅಲ್ಲದೇ ವಿದ್ಯಾ ಪತಿ ಬೆಂಗಳೂರಿನ ಶಂಕರಿಪುರಂನಲ್ಲಿ ಪೊಲೀಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಮದುವೆ ಆರಂಭದಿಂದಲೂ ಪತಿ ಕುಟುಂಬದಿಂದ ಕಿರುಕುಳ ನೀಡಲಾಗಿತ್ತು ಎಂಬ ಆರೋಪ ಕೇಳಿ ಬಂದಿದೆ. ಹೀಗಾಗಿ ಜೂನ್ 30ರಿಂದ ವಿದ್ಯಾ ಕಾಣೆಯಾಗಿದ್ದಳು. ನಿನ್ನೆ ಸಂಜೆ ಅರಸೀಕೆರೆ ನಗರದ ರೈಲ್ವೆ ಟ್ರ್ಯಾಕ್ ಬಳಿ ಶವವಾಗಿ ಪತ್ತೆಯಾಗಿದ್ದಾಳೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಬೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

ಆದರೆ ಪತಿ ಕುಟುಂಬ ಸದಸ್ಯರಿಂದಲೇ ಮಗಳ ಹತ್ಯೆ ಎಂದು ವಿದ್ಯಾ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related Articles

Back to top button