ಇತರೆ
ಮದುವೆ ಮುಗಿಸಿ ವಾಪಸಾಗುತ್ತಿದ್ದ ದಂಪತಿ ಬೈಕ್‌ಗೆ ಕಾರು ಡಿಕ್ಕಿ, ಸ್ಥಳದಲ್ಲೇ ದಂಪತಿ ಸಾವು

Views: 85
ಹಾಸನ: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬರಗೂರು ಹ್ಯಾಂಡ್ ಪೋಸ್ಟ್ ಬಳಿ ಅಪಘಾತ ಸಂಭವಿಸಿದೆ
ಮೃತರನ್ನು 52 ವರ್ಷದ ಚಂದ್ರೇಗೌಡ ಮತ್ತು 45 ವರ್ಷದ ಹೇಮಲತಾ ಎಂದು ತಿಳಿದುಬಂದಿದೆ. ಉದಯಪುರ ಗ್ರಾಮದಲ್ಲಿ ಮದುವೆ ಮುಗಿಸಿ ಬೈಕ್‌ನಲ್ಲಿ ಚನ್ನರಾಯಪಟ್ಟಣಕ್ಕೆ ವಾಪಾಸ್ ಆಗುತ್ತಿದ್ದ ವೇಳೆ ಕಾರು ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು.
ಡಿಕ್ಕಿ ರಭಸಕ್ಕೆ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಚನ್ನರಾಯಪಟ್ಟಣ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.