ಇತರೆ
ಮದುವೆ ಸಮಾರಂಭಕ್ಕೆ ಹೊರಟಿದ್ದ ಬಸ್ ಅಪಘಾತ: ಮಗು ಸೇರಿ ಏಳು ಮಂದಿ ಮೃತ್ಯು

Views: 0
ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಆರು ವರ್ಷದ ಮಗು ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದು, 29 ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಆಂಧ್ರಪ್ರದೇಶದಲ್ಲಿ ಮಂಗಳವಾರ ಮುಂಜಾನೆ ಭೀಕರ ಅವಘಡ ಸಂಭವಿಸಿದೆ.
ಮೃತರನ್ನು ಅಬ್ದುಲ್ ಪ್ಲಾಗಿಜ್ (65) ಅಬ್ದುಲ್ ಹನಿ (60) ಶೇಕ್ ರಫೀಜ್ (48 )ಮುಲ್ಲಾ ನೂಜಹಾನ್( 58) ಮುಲ್ಲಾ ಹಾನಿ ಬೇಗಂ( 65) ಶೇಕ್ ಸಬೀನಾ( 35) ಶೇಕ್ ಹೀನ(6) ಎಂದು ಗುರುತಿಸಲಾಗಿದೆ.ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಮದುವೆ ಸಮಾರಂಭಕ್ಕೆ ಹೊರಟಿದ್ದ ಸಂದರ್ಭದಲ್ಲಿ ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಬಸ್ ಡಿಕ್ಕಿ ಹೊಡೆಯಿತು. ಚಾಲಕ ಬಸ್ ನ್ನು ತಿರುಗಿಸುವ ವೇಳೆಯಲ್ಲಿ ಬಸ್ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದಿದೆ. ಈ ಸಂದರ್ಭದಲ್ಲಿ ಬಸ್ಸಿನಲ್ಲಿ 47 ಮಂದಿ ಪ್ರಯಾಣಿಕರು ಇದ್ದರು.
ಏಳು ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.