ಇತರೆ
ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ ಬೆಳೆದಿದ್ದ ದಂಪತಿ ಬಂಧನ

Views: 150
ಕನ್ನಡ ಕರಾವಳಿ ಸುದ್ದಿ: ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ ಬೆಳೆದಿದ್ದ ದಂಪತಿಯನ್ನು ಬೆಂಗಳೂರು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ.
ನೇಪಾಳ ಮೂಲದ ಊರ್ಮಿಳಾ ಹಾಗೂ ಗುರುಂಗ್ ಗಾಂಜಾ ಬೆಳಸಿದ್ದ ಆರೋಪಿಗಳಾಗಿದ್ದು, ಇಬ್ಬರನ್ನೂ ಪೊಲೀಸ್ ಠಾಣೆಯ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಸದಾಶಿವನಗರದ ಎಮ್ಎಸ್ಆರ್ ನಗರದಲ್ಲಿ ವಾಸವಾಗಿದ್ದ ದಂಪತಿಯು ಮನೆ ಬಾಲ್ಕನಿಯಲ್ಲಿದ್ದ ಕುಂಡದಲ್ಲಿ ಗಾಂಜಾ ಗಿಡ ಬೆಳಸಿದ್ದರು. ಇತ್ತೀಚಿಗೆ ಊರ್ಮಿಳಾ ಮನೆಯ ಬಾಲ್ಕನಿಯಲ್ಲಿ ರೀಲ್ಸ್ ಮಾಡಿ ಪೋಸ್ಟ್ ಮಾಡಿದ್ದಳು. ಊರ್ಮಿಳಾ ಮಾಡಿದ್ದ ರೀಲ್ಸ್ ನಲ್ಲಿ ಗಾಂಜಾ ಗಿಡ ಕಾಣಿಸಿಕೊಂಡಿದೆ. ಗಾಂಜಾ ಗಿಡ ಕುರಿತು ವ್ಯಕ್ತಿಯೋರ್ವ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಮಾಹಿತಿ ಆಧರಿಸಿ ಪರಿಶೀಲನೆ ನಡೆಸಿದಾಗ ಗಾಂಜಾ ಗಿಡ ಪತ್ತೆಯಾಗಿದೆ. 15 ವಿವಿಧ ಮಾದರಿಯ ಹೂವಿನ ಗಿಡಗಳ ಮಧ್ಯೆ ದಂಪತಿ ಗಾಂಜಾ ಗಿಡ ಬೆಳೆಸಿದ್ದರು. 54 ಗ್ರಾಂ ಗಾಂಜಾ ಸೊಪ್ಪನ್ನು ಸದಾಶಿವನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.