ಇತರೆ
ಮರವಂತೆಯಲ್ಲಿ ಬೈಕ್ ಯೂಟರ್ನ್ ಮಾಡುವಾಗ ಪಿಕ್ಅಪ್ ವಾಹನ ಡಿಕ್ಕಿ: ಸವಾರ ಸಾವು

Views: 218
ಕನ್ನಡ ಕರಾವಳಿ ಸುದ್ದಿ: ಬೈಕ್ ಯೂಟರ್ನ್ ಮಾಡುವಾಗ ಪಿಕ್ಅಪ್ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮರವಂತೆ ಬಸ್ ನಿಲ್ದಾಣದ ಸಮೀಪದ ಜಂಕ್ಷನ್ ಬಳಿ ಮಂಗಳವಾರ ನಡೆದಿದೆ.
ಮರವಂತೆಯ ನಿವಾಸಿ ಲಕ್ಷ್ಮಣ ಪೂಜಾರಿ (48) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಬಸ್ ನಿಲ್ದಾಣದ ಸಮೀಪ ಲಕ್ಷ್ಮಣ ಪೂಜಾರಿ ತಮ್ಮ ಬೈಕ್ ಯೂಟರ್ನ್ ತೆಗೆದುಕೊಳ್ಳುತ್ತಿರುವಾಗ ಕುಂದಾಪುರ ಕಡೆಯಿಂದ ಬೈಂದೂರಿನತ್ತ ಸಾಗುತ್ತಿದ್ದ ಪಿಕ್‌ಅಪ್ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಲಕ್ಷ್ಮಣ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಗಂಗೊಳ್ಳಿ ಪೊಲೀಸ್ ಅಪರಾಧ ವಿಭಾಗದ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.