ಇತರೆ

ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ; ವ್ಯಾಪಕ ಆಕ್ರೋಶ

Views: 155

ಕನ್ನಡ ಕರಾವಳಿ ಸುದ್ದಿ: ಕಿಡಿಗೇಡಿಗಳು ಮೂರು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಘಟನೆ ನಗರದ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ  ನಡೆದಿದೆ. ರಸ್ತೆಬದಿ ಶೆಡ್‌ನಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲುಗಳನ್ನು ಕೊಯ್ದಿದ್ದು,ರಾತ್ರಿಯಿಡೀ ಹಸುಗಳು ರಕ್ತದ ಮಡುವಿನಲ್ಲಿ ನರಳಾಡಿವೆ. ಮೂಕರೋಧನೆ ಅನುಭವಿಸುತ್ತಿದ್ದ ಹಸುಗಳಿಗೆ ಚಾಮರಾಜಪೇಟೆಯ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸ್ಥಳಕ್ಕೆ ಹಿಂದೂ ಕಾರ್ಯಕರ್ತರು ಧಾವಿಸಿದ್ದು, ಕೃತ್ಯವನ್ನು ತೀವ್ರ ಖಂಡಿಸಿದ್ದಾರೆ. ಘಟನಾ ಸ್ಥಳಕ್ಕೆ ಸಂಸದ ಪಿ ಸಿ ಮೋಹನ್, ವಿಪಕ್ಷ ನಾಯಕ ಆರ್ ಅಶೋಕ್ ಭೇಟಿ ನೀಡಿದ್ದು, ದುಷ್ಕೃತ್ಯವನ್ನು ಖಂಡಿಸಿದ್ದಾರೆ.ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳದಲ್ಲಿ ಕೆಎಸ್ಆರ್ಪಿ ತುಕಡಿ ನಿಯೋಜಿಸಲಾಗಿದೆ. ಕಾಟನ್‌ಪೇಟೆ ಠಾಣೆ ಪೊಲೀಸ್ ಸಿಬ್ಬಂದಿ, ಚಿಕ್ಕಪೇಟೆ ಉಪವಿಭಾಗದ ಎಸಿಪಿ ನೇತೃತ್ವದಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ.

 

 

Related Articles

Back to top button