ಮಲ್ಪೆ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ ಪ್ರಕರಣ; ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟನೆ

Views: 163
ಕನ್ನಡ ಕರಾವಳಿ ಸುದ್ದಿ: ಉಡುಪಿ ಮಲ್ಪೆಯ ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯ ಬಗ್ಗೆ ಹರಿದಾಡುತ್ತಿರುವ ಊಹಾಪೋಹಗಳು ಹಾಗೂ ಸುಳ್ಳು ಸುದ್ದಿಯ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಸ್ಪಷ್ಟನೆ ನೀಡಿ,ಸುಳ್ಳು ಸುದ್ದಿಯ ಬಗ್ಗೆ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದಾರೆ.
ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾದ ಬಗ್ಗೆ ಮಸೀದಿಯವರು ಮಾಹಿತಿ ನೀಡಿದ್ದಾರೆ. ಅದೊಂದು ಕಾರ್ಮಿಕರಿಗಾಗಿ ನಿರ್ಮಾಣ ಮಾಡಿದ್ದ ಶೌಚಾಲಯವಾಗಿದ್ದು, ಯುವತಿಯೊಬ್ಬಳು ಆಗಮಿಸಿ ಯಾವುದೇ ಪ್ರೊಸೀಜರ್ ಇಲ್ಲದೆ ಅಬಾರ್ಷನ್ ಮಾಡಿಕೊಳ್ಳಲು ಯತ್ನಿಸಿ ಹೊಟ್ಟೆನೋವು ಕಾಣಿಸಿ ಈ ಶೌಚಾಲಯಕ್ಕೆ ಬಂದಿದ್ದಾಳೆ.
ಬಳಿಕ ಅಲ್ಲಿ ಮಗುವನ್ನು ಬಿಟ್ಟು ಹೋಗಿದ್ದು, ಆಕೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾಳೆ. ಆಕೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಮಗು ನನ್ನದೇ ಎಂದು ಹೇಳಿಕೊಂಡಿದ್ದಾಳೆ. ಆಸ್ಪತ್ರೆಯಿಂದ ಬಿಡುಗಡೆ ಆದ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುವುದು.