ಇತರೆ
ಮಳೆ ನೀರಿನ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾವು

Views: 0
ಕಲಬುರ್ಗಿ ಜಿಲ್ಲೆಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ಹಲವು ಕಡೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ ,ನಗರದಲ್ಲಿ ಓವರ್ ಹೆಡ್ ನೀರಿನ ಟ್ಯಾಂಕ್ ನಿರ್ಮಾಣ ಹಂತದಲ್ಲಿತ್ತು .ಈ ಗುಂಡಿಗೆ ಇಬ್ಬರು ಬಾಲಕರು ಆಕಸ್ಮಿಕವಾಗಿ ಬಿದ್ದು ಮೃತ ಪಟ್ಟಿದ್ದಾರೆ.
11 ವರ್ಷದ ಅಭಿ ಹಾಗೂ 12 ವರ್ಷದ ಅಜಯ್ ಮೃತಪಟ್ಟ ಬಾಲಕರು.
ಮಳೆಯಿಂದ ಸಂಪೂರ್ಣ ಜಲಾವೃತಗೊಂಡಿದ್ದರಿಂದ ಗುಂಡಿ ಎಂದು ತಿಳಿಯದೆ ಬಾಲಕರಿಬ್ಬರೂ ಆಕಸ್ಮಿಕವಾಗಿ ಮೃತಪಟ್ಟ ಘಟನೆ ನಡೆದಿದೆ .
ಚೌಕ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.