ರಾಜಕೀಯ

ಮಹಾರಾಷ್ಟ್ರದ ಮಾಜಿ ಸಿಎಂ ಮನೋಹರ್ ಜೋಶಿ ನಿಧನ

Views: 30

ಮುಂಬೈ: ಮಹಾರಾಷ್ಟ್ರದ ಮಾಜಿ ಸಿಎಂ ಮನೋಹರ್ ಜೋಶಿ ಮುಂಬೈನ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

2 ದಿನಗಳ ಹಿಂದಷ್ಟೇ ಅವರಿಗೆ ಹೃದಯಸ್ತಂಭನ ಆಗಿದ್ದರಿಂದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಮುಂಬೈನ ಶಿವಾಜಿ ಪಾರ್ಕ್ ರುದ್ರಭೂಮಿಯಲ್ಲಿ ಶುಕ್ರವಾರವೇ ಅವರ ಅಂತ್ಯಸಂಸ್ಕಾರ ನೆರವೇರಲಿದೆ.

ಮನೋಹರ್ ಜೋಶಿ ಅವರು ರಾಯಗಡ ಜಿಲ್ಲೆಯ ನಂಡ್ವಿ ಗ್ರಾಮದಲ್ಲಿ 1937ರ ಡಿಸೆಂಬರ್​​ 2 ರಂದು ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು. ಎಂಎ ಮತ್ತು ಎಲ್​ಎಲ್​ಬಿ ಪದವಿಗಳನ್ನು ಮುಂಬೈ ವಿಶ್ವವಿದ್ಯಾಲಯದಿಂದ ಪಡೆದರು. ಜೋಶಿ ಅವರು 1995ರಿಂದ 1999ರವರೆಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಅವಿಭಜಿತ ಶಿವಸೇನಾದಿಂದ ರಾಜ್ಯದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ನಾಯಕರಾಗಿದ್ದರು. ಸಂಸತ್ ಸದಸ್ಯರಾಗಿಯೂ ಸೇವೆ ಸಲ್ಲಿದ್ದ ಇವರು ವಾಜಪೇಯಿ ಸರ್ಕಾರ ಅಧಿಕಾರದಲ್ಲಿದ್ದಾಗ 2002ರಿಂದ 2004ರವರೆಗೆ ಲೋಕಸಭಾ ಸ್ಪೀಕರ್ ಆಗಿಯೂ ಸೇವೆ ಸಲ್ಲಿದ್ದರು .

Related Articles

Back to top button