ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ 8 ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಸಾವು

Views: 140
ಕನ್ನಡ ಕರಾವಳಿ ಸುದ್ದಿ: ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಮೃತಪಟ್ಟ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಮೃತರೆಲ್ಲರೂ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದರು. ಮೃತರನ್ನು ಭಿಲ್ವಾರದ ಕೊಟ್ರಿ ಪ್ರದೇಶದ ನಿವಾಸಿಗಳಾದ ದಿನೇಶ್ ರೇಗರ್, ಸುರೇಶ್ ರೇಗರ್, ರವಿಕಾಂತ್ ರೇಗರ್, ಬಾಬು ರೇಗರ್, ಬಬ್ಲು ಮೇವಾರ, ಕಿಶನ್ ಲಾಲ್, ನಾರಾಯಣ ಬೈರ್ವಾ ಮತ್ತು ಪ್ರಮೋದ್ ಸುತಾರ್ ಎಂದು ಗುರುತಿಸಲಾಗಿದೆ.
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ಕಾರು ಮತ್ತು ಜೋಧಪುರಕ್ಕೆ ಹೋಗುತ್ತಿದ್ದ ಬಸ್ ಡಿಕ್ಕಿ ಹೊಡೆದು ಕಾರಿನಲ್ಲಿದ್ದ 8 ಮಂದಿ ಮೃತಪಟ್ಟಿದ್ದಾರೆ.ಜೈಪುರ-ಅಜ್ಮೀರ್ ಹೆದ್ದಾರಿಯ ದುಡು ಎಂಬಲ್ಲಿ ಅಪಘಾತ ನಡೆದಿದೆ. ಕಾರು ಭಿಲ್ವಾರದಿಂದ ಉತ್ತರ ಪ್ರದೇಶಕ್ಕೆ ತೆರಳುತ್ತಿದ್ದರೆ, ಬಸ್ ಜೈಪುರದಿಂದ ಜೋಧಪುರಕ್ಕೆ ಹೋಗುತ್ತಿತ್ತು. ಬಸ್‌ನಲ್ಲಿ 30ರಿಂದ 40 ಪ್ರಯಾಣಿಕರಿದ್ದರು.
ಟೈರ್ ಸ್ಫೋಟಗೊಂಡ ಕಾರಣ ನಿಯಂತ್ರಣ ಕಳೆದುಕೊಂಡ ಬಸ್ ಚಾಲಕ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ.
ಚಾಲಕ ನಿರ್ಲಕ್ಷ್ಯದಿಂದಲೇ ಸಾವು ಸಂಭವಿಸಿದೆ ಎಂದು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
“