ಜನಮನ
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪಗೆ ಗೌರವ ಡಾಕ್ಟರೇಟ್ ಪ್ರದಾನ

Views: 0
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿ.ವಿ ಇಂದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.
ವಿಶ್ವವಿದ್ಯಾನಿಲಯದ ಎಂಟನೇ ಘಟಿಕೋತ್ಸವ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್ ಅವರು ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.
ಗೌರವ ಡಾಕ್ಟರೇಟ್ ಸ್ವೀಕರಿಸಿದ ಬಳಿಕ ಮಾತನಾಡಿದ ಯಡಿಯೂರಪ್ಪ ,ನಮ್ಮ ಅನ್ನದಾತ ರೈತರ ಹಕ್ಕು ಹಾಗೂ ಹಿತ ರಕ್ಷಣೆ ನಿಟ್ಟಿನಲ್ಲಿ ನನ್ನ ಪ್ರಾಮಾಣಿಕ ಪ್ರಯತ್ನಗಳಿಗೆ ಸಂದ ಗೌರವವಾಗಿದೆ.
ನಮ್ಮ ರೈತರು ನೆಮ್ಮದಿಯಿಂದ ಬದುಕುವಂತಾಗುವ ನಿಟ್ಟಿನಲ್ಲಿ ಮತ್ತಷ್ಟು ಪ್ರಯತ್ನಿಸಲು ಈ ಗೌರವ ನನಗೆ ಪ್ರೇರಣೆ ನೀಡಿದೆ ಎಂದರು.