ರಾಜಕೀಯ
ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ ನಿಧನ

Views: 55
ದಾವಣಗೆರೆ: ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ (90) ವಯೋಸಹಜ ಕಾಯಿಲೆಯಿಂದ ಶನಿವಾರ ಸಂಜೆ ವಿಧಿವಶರಾಗಿದ್ದಾರೆ.
ನಾಗಮ್ಮ ಕೇಶವಮೂರ್ತಿ ಅವರು 1972, 1978, ಮತ್ತು 1989ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. ಗುಂಡೂರಾವ್ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು. ದಾವಣಗೆರೆ ಮತ್ತು ಮಾಯಕೊಂಡ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರು. ನಾಗಮ್ಮ ಅವರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದವರು. ಪಕ್ಷದಲ್ಲಿ ರಾಜ್ಯ ಉಪಾಧ್ಯಕ್ಷರಾಗಿ ಕೆಲಸ ಮಾಡಿದ್ದರು. ಅಷ್ಟೇ ಅಲ್ಲ ಪ್ರಧಾನ ಕಾರ್ಯದರ್ಶಿಯಾಗಿ, ಮಹಿಳಾ ಘಟಕದ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ಇಂದು ಮಧ್ಯಾಹ್ನ 3 ಗಂಟೆಗೆ ಹಳೆ ಪಿಬಿ ರಸ್ತೆಯ ವೈಕುಂಠ ಧಾಮದಲ್ಲಿ ನಾಗಮ್ಮ ಕೇಶವಮೂರ್ತಿ ಅವರ ಅಂತಿಮ ಸಂಸ್ಕಾರ ನಡೆಯಲಿದೆ. ಪಿ.ಜೆ ಬಡಾವಣೆಯ ನಿವಾಸದಲ್ಲಿ ಅಭಿಮಾನಿಗಳು ಮತ್ತು ಗಣ್ಯರಿಗಾಗಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.