ರಾಜಕೀಯ

ಮಾಜಿ ಸಿಎಂ ಆರೋಗ್ಯದಲ್ಲಿ ಏರುಪೇರು:ಆಸ್ಪತ್ರೆಗೆ ದಾಖಲು

Views: 73

ಕನ್ನಡ ಕರಾವಳಿ ಸುದ್ದಿ: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರಿಗೆ ಅನಾರೋಗ್ಯದಲ್ಲಿ ಏರುಪೇರು ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಡಾ. ಸತ್ಯನಾರಾಯಣ ಹಾಗೂ ಡಾ. ಸುನಿಲ್ ಕಾರಂತ್ ನೇತೃತ್ವದಲ್ಲಿ ಎಸ್‌ಎಂ ಕೃಷ್ಣ ಗೆ ಚಿಕಿತ್ಸೆ ಮುಂದುವರಿದಿದೆ.

ಕೆಲ ದಿನಗಳ ಹಿಂದೆ ಎಸ್.ಎಂ ಕೃಷ್ಣ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾ ಚಿಕಿತ್ಸೆ ಪಡೆದುಕೊಂಡು ಬಿಡುಗಡೆಯಾಗಿದ್ದರು

ಇದೀಗ ಮತ್ತೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ

Related Articles

Back to top button