ರಾಜಕೀಯ
ಮಾರ್ಚ್‌ನಲ್ಲಿ ನೀತಿ ಸಂಹಿತೆ ಜಾರಿ: ಮನ್ ಕಿ ಬಾತ್ ನಲ್ಲಿ ಪ್ರಧಾನಿ

Views: 78
ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಬಿರುಸಿನ ತಯಾರಿ ನಡೆಸುತ್ತಿರುವ ಹೊತ್ತಲ್ಲೇ, ಮಾರ್ಚ್ ತಿಂಗಳಿನಲ್ಲಿ ಸಾರ್ವತ್ರಿಕ ಚುನಾವಣೆಯ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸುಳಿವು ನೀಡಿದ್ದಾರೆ. ಮಾರ್ಚ್ ತಿಂಗಳ 13ಇಲ್ಲವೆ 14 ರಂದು ಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗಲಿದೆ ಎಂಬ ಮಾಹಿತಿಗಳು ಹರಿದಾಡುತ್ತಿದೆ. ಇದರ ನಡುವೆ ಪ್ರಧಾನಿ ನೀಡಿರುವ ಸುಳಿವು, ರಾಜಕೀಯ ಪಕ್ಷಗಳಲ್ಲಿ ಸಂಚಲನ ಮೂಡಿಸಿದೆ.
ಆಕಾಶವಾಣಿಯ ಮನ್ ಕಿ ಬಾತ್ ಸರಣಿಯ 11೦ನೇ ಹಾಗು ಪ್ರಸಕ್ತ ಲೋಕಸಭೆಯ ಕಡೆಯ ಸಂಚಿಕೆಯಲ್ಲಿ ದೇಶವಾಸಿಗಳನ್ನುದ್ದೇಶಿಸಿ ಮಾತನಾಡಿದ ಅವರು ಲೋಕಸಭೆಯ ಚುನವಣೆಯಲ್ಲಿ ಯುವ ಮತದಾರರು ದಾಖಲೆಯ ಪ್ರಮಾಣದಲ್ಲಿ ಹೆಚ್ಚು ಮತದಾನ ಮಾಡುವಂತೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಮಂದಿ ಹಾಗು ಇನ್‌ಫ್ಲುಯೆನ್ಸರ್ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದ್ದಾರೆ.ಇನ್ನು ಮೂರು ತಿಂಗಳು ಮನ್ ಟಿ ಬಾತ್ ಇರುವುದಿಲ್ಲ ಎಂದು ತಿಳಿದು ಬಂದಿದೆ.