ಮಾಸ್ಟರ್ ಪ್ಲಾನ್ ಮಾಡಲು ರಾಜ್ಯಕ್ಕೆ ಬಿಜೆಪಿ ಚಾಣಕ್ಯ ಅಮಿತ್ ಶಾ ಎಂಟ್ರಿ, ಪಕ್ಷದಲ್ಲಿ ಸಮರೋತ್ಸಾಹ!

Views: 68
ಕರ್ನಾಟಕದ ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಇದೇ ಮೊದಲ ಬಾರಿಗೆ ಬಿಜೆಪಿ ಚಾಣಕ್ಯ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡ್ತಿದ್ದಾರೆ. ಸುತ್ತೂರು ಜಾತ್ರೆಯ ನೆಪದಲ್ಲಿ ಮೈಸೂರಿಗೆ ಬರುತ್ತಿರುವ ಅಮಿತ್ ಶಾ, ಲೋಕಸಭಾ ಚುನಾವಣಾ ಸಿದ್ಧತೆಗೆ ಕಹಳೆ ಮೊಳಗಿಸುವ ಸಾಧ್ಯತೆ ಇದೆ. ಅಮಿತ್ ಶಾ ಆಗಮನದಿಂದ ಬಿಜೆಪಿಯಲ್ಲಿ ಸಂಚಲನ ಸೃಷ್ಟಿಯಾಗಿದೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ಕಣ ರಂಗೇರುತ್ತಿದೆ. ಇದರ ನಡುವೆ ಬಿಜೆಪಿ ಚಾಣಕ್ಯ ಅಮಿತ್ ಶಾ ಎರಡು ದಿನಗಳ ಮೈಸೂರು ಪ್ರವಾಸ ಕೈಗೊಂಡಿದ್ದಾರೆ. 2023ರ ವಿಧಾನಸಭಾ ಚುನಾವಣೆ ಸೋತ ಬಳಿಕ ಮೊದಲ ಬಾರಿಗೆ ಬಿಜೆಪಿ ಚಾಣಾಕ್ಯ ಅಮಿತ್ ಶಾ ರಾಜ್ಯಕ್ಕೆ ಆಗಮಿಸ್ತಿದ್ದು, ಪಕ್ಷದಲ್ಲಿ ಸಮರೋತ್ಸಾಹ ತುಂಬಿದೆ.ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಚಾಣಕ್ಯ ಅಮಿತ್ ಶಾ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ನಿನ್ನೆ ರಾತ್ರಿ ಮೈಸೂರಿಗೆ ಆಗಮಿಸಿದ್ದರು. ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅಮಿತ್ ಶಾ ಬಳಿಕ ರಸ್ತೆ ಮಾರ್ಗವಾಗಿ ರಾಡಿಸನ್ ಬ್ಲೂ ಹೋಟೆಲ್‌ಗೆ ತೆರಳಿ ವಾಸ್ತವ್ಯ ಹೂಡಲಿದ್ದಾರೆ. ಇಂದು ಸುತ್ತೂರಿಗೆ ಭೇಟಿ ನೀಡಲಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ಅಮಿತ್ ಶಾ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಚಾಮುಂಡೇಶ್ವರಿ ದರ್ಶನದ ಬಳಿಕ ಸುತ್ತೂರು ಗ್ರಾಮಕ್ಕೆ ಪ್ರಯಾಣ ಬೆಳಸಲಿದ್ದಾರೆ. ಬಳಿಕ ಸುತ್ತೂರು ಜಾತ್ರೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ. ಇನ್ನು ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ನಿರ್ಮಾಣದ ಗೆಸ್ಟ್ ಹೌಸ್ ಉದ್ಘಾಟನೆ ಮಾಡಲಿದ್ದಾರೆ, ಬಳಿಕ ಮಧ್ಯಾಗ್ನ 2.30ಕ್ಕೆ ಸುತ್ತೂರಿನಿಂದ ಹೆಲಿಕಾಪ್ಟರ್ನಲ್ಲಿ ಮೈಸೂರಿಗೆ ವಾಪಸ್ ಆಗಲಿದ್ದಾರೆ. ರಾಡಿಸನ್ ಬ್ಲೂ ಹೋಟೆಲ್‌ಗೆ ತೆರಳಿ ಸುಮಾರು 2 ಗಂಟೆಗೂ ಹೆಚ್ಚು ಕಾಲ ಕಾರ್ಯಕರ್ತರ ಜೊತೆ ಸಭೆ ನಡೆಸಲಿದ್ದಾರೆ.
ಸುತ್ತೂರು ಜಾತ್ರಾ ಮಹೋತ್ಸವದ ನೆಪದಲ್ಲಿ ಚುನಾವಣೆಗೆ ರಣತಂತ್ರ ಹೆಣೆಯಲು ಕರ್ನಾಟಕಕ್ಕೆ ಆಗಮಿಸುತ್ತಿದ್ದು, ಹಲವು ತಂತ್ರಗಾರಿಕೆ ಹಾಗೂ ಚುನಾವಣಾ ಸಿದ್ದತೆಗೆ ಅಮಿತ್ ಶಾ ಅವರು ಸೂಚನೆ ನೀಡುವ ಸಾಧ್ಯತೆ ಇದೆ. ಜೆಡಿಎಸ್ ಜೊತೆಗಿನ ಮೈತ್ರಿ ಹಾಗೂ ಪಕ್ಷದಲ್ಲಿರುವ ಅಸಮಾಧಾನವನ್ನು ಶಮನಗೊಳಿಸಿಕೊಂಡು ಚುನಾವಣೆಗೆ ಸಿದ್ದರಾಗಿ ಎಂದು ರಾಜ್ಯ ಬಿಜೆಪಿ ನಾಯಕರು, ಕಾರ್ಯಕರ್ತರ ಜೊತೆ ಸಭೆ ನಡೆಸಲಿದ್ದಾರೆ. ಅಮಿತ್ ಶಾ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಭಾಗಹಿಸುವುದರ ಜೊತೆ ಜೊತೆಗೆ ಲೋಕಸಭಾ ಚುನಾವಣೆ ಸಂಬಂಧ ರಾಜ್ಯ ನಾಯಕರ ಜೊತೆ ಸಭೆ ಮಾಡಲಿದ್ದಾರೆ.
ಈ ಸಭೆಯಲ್ಲಿ ರಾಜ್ಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಕೋಟಾ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ. ಸಂಜೆ 4.55ಕ್ಕೆ ಮೈಸೂರಿನಿಂದ ಅಮಿತ್ ಶಾ ತೆರಳಲಿದ್ದಾರೆ,