ಸಾಂಸ್ಕೃತಿಕ

ಮಾ.6 ಬಿ.ಡಿ. ಶೆಟ್ಟಿ ಕಾಲೇಜಿನಲ್ಲಿ ಕನ್ನಡ ಜಾನಪದ ಪರಿಷತ್ ಸಂಯುಕ್ತ ಆಶ್ರಯದಲ್ಲಿ ವಿವಿಧ ಕಾರ್ಯಕ್ರಮಗಳು   

Views: 46

ಉಡುಪಿ: ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕ ಹಾಗೂ ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸ್ ಹಾಗೂ ಬಿ.ಡಿ. ಶೆಟ್ಟಿ ಕಾಲೇಜ್ ಆಫ್ ಬಿಸ್ನೆಸ್ ಮ್ಯಾನೇಜ್ ಮೆಂಟ್, ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ:06/03/2024 ರಂದು ಸಮಯ ಅಪರಾಹ್ನ 1 ಗಂಟೆಗೆ ಕಾಲೇಜು ಸಭಾಂಗಣದಲ್ಲಿ ಸಂಸ್ಥಾಪನಾ ದಿನಾಚರಣೆ – ಗಾಯನ – ಸನ್ಮಾನ ಕಾರ್ಯಕ್ರಮ ಜರುಗಲಿರುವುದು.

ಈ ಕಾರ್ಯಕ್ರಮದಲ್ಲಿ , 2023/2024 ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಅತೀ ಹೆಚ್ಚು ಅಂಕ ಪಡೆದ ಇಬ್ಬರು ವಿದ್ಯಾರ್ಥಿಗಳನ್ನು ನಗದು ಪುರಸ್ಕಾರ ನೀಡಿ ಗೌರವಿಸಲಾಗುವುದು, ಮತ್ತು ಹಿರಿಯ ಜಾನಪದ ಕಲಾವಿದರಾದ ಶ್ರೀ ಮರಿಯಾ ನಾಯಕ್ ಪೇತ್ರಿ ,ಹಾಗೂ ಶ್ರೀ ಗುಂಡು ಪೂಜಾರಿ ಸಾಲಿಗ್ರಾಮ ಇವರನ್ನು ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಗೌರವಿಸಲಾಗುವುದು

ಈ ಕಾರ್ಯಕ್ರಮವು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷರಾದ ಡಾ.ಎಸ್ ಜಾನಪದ ಬಾಲಾಜಿ ಅವರ ಮಾರ್ಗದರ್ಶನದಲ್ಲಿ ನಡೆಸಲಾಗುತ್ತಿದೆ ಎಂದು ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷರಾದ ಡಾ.ಗಣೇಶ್ ಗಂಗೊಳ್ಳಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Related Articles

Back to top button