‘ಮಿಸ್ ಟೀನ್ ಗ್ಲೋಬಲ್ ವರ್ಲ್ಡ್ ಇಂಡಿಯಾ’ ಪ್ರಶಸ್ತಿ ಪಡೆದ ಇಶಿಕಾ ಶೆಟ್ಟಿ

Views: 45
ಮಂಗಳೂರು: ದೆಹಲಿಯ ಬಾಲಕಟೋರ ಸ್ಟೇಡಿಯಂನಲ್ಲಿ ಫೆ.27 ರಂದು ಗ್ಲೋಬಲ್ ಇಂಡಿಯಾ ಎಂಟರ್ ಟೈನ್ ಮೆಂಟ್ ಪ್ರೊಡಕ್ಷನ್ ಮತ್ತು ಆಲಿ ಶರ್ಮಾ ಜಂಟಿಯಾಗಿ ಪ್ರಸ್ತುತ ಪಡಿಸಿರುವ ಮಿಸ್ಸಸ್ /ಮಿಸ್ಟರ್ ಮತ್ತು ಮಿಸ್ ಹಾಗೂ ಮಿಸ್ ಟೀನ್ ಗ್ಲೋಬಲ್ ವಲ್ಡ್ ಸೌಂದರ್ಯ ಸ್ಪರ್ಧೆಯಲ್ಲಿ ಮಂಗಳೂರಿನ ಕುಮಾರಿ ಈಶಿಕಾ ಶೆಟ್ಟಿ “ಗ್ಲೋಬಲ್ ಮಿಸ್ ಟೀನ್ ವರ್ಲ್ಡ್ ಇಂಡಿಯಾ ಓಶಿಯಾನ 2024” ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿರುತ್ತಾರೆ
ಕಾವೂರಿನ ಶಿವ ನಗರದಲ್ಲಿ ವಾಸವಾಗಿರುವ ಇಶಿಕಾ ಶೆಟ್ಟಿ ಮಂಗಳೂರು ನಗರ ಪೊಲೀಸ್ ಇಲಾಖೆಯಲ್ಲಿ ಎ.ಎಸ್.ಐ ಆಗಿರುವ ಶರತ್ ಕುಮಾರ್ ಶೆಟ್ಟಿ ಹಾಗೂ ಶ್ವೇತಾ ಶರತ್ ಶೆಟ್ಟಿ ದಂಪತಿಯ ಪ್ರಥಮ ಪುತ್ರಿಯಾಗಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಶಿಕಾ ಶೆಟ್ಟಿ, ಪೋಷಕರ ಸಹಕಾರದಿಂದ ನಾನು ಈ ಸ್ಪರ್ಧೆಯಲ್ಲಿ ಪಾಲ್ಗೊಂಡು ಗೆಲ್ಲಲು ಸಾಧ್ಯವಾಯಿತು ಎಂದರು.
ಸೌಂದರ್ಯ ಸ್ಪರ್ಧೆಯಲ್ಲಿ ದೇಶದ ನಾನಾ ಭಾಗಗಳಿಂದ 65ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದು, ಇದರಲ್ಲಿ ಇಶಿಕಾ ಶೆಟ್ಟಿ ಪ್ರಥಮ ಸ್ಥಾನ ಪಡೆದಿದ್ದಾಳೆ
ಶಾರದಾ ವಿದ್ಯಾಲಯ ಮತ್ತು ಬೆಸೆಂಟ್ ಕಾಲೇಜ್ ನಲ್ಲಿ ವಿದ್ಯಾಭ್ಯಾಸ ಮುಗಿಸಿ ಪ್ರಸ್ತುತ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪ್ರಥಮ ಪದವಿ ವ್ಯಾಸಾಂಗ ಮಾಡುತ್ತಿರುತ್ತಾರೆ.