ರಾಜಕೀಯ
ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ; ಚುನಾವಣಾ ನಿವೃತ್ತಿ ಘೋಷಿಸಿದ ಸಿಎಂ ಸಿದ್ದರಾಮಯ್ಯ..!?

Views: 80
ಸಿಎಂ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ಇನ್ನು ನಾಲ್ಕು ವರ್ಷಕ್ಕೆ ತಮಗೆ ಆಗುವ ವಯಸ್ಸಿನ ಲೆಕ್ಕಾಚಾರದ ಮೇಲೆ ಮತ್ತೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಮೈಸೂರಿನಲ್ಲಿ ಹೇಳಿದ್ದಾರೆ. ಚುನಾವಣೆಗೆ ಸ್ಪರ್ಧೆ ಮಾಡುವ ಬಗ್ಗೆ ನನಗೆ ಆತಂಕ ಇದ್ದರೆ ತಾನೇ ಟೆನ್ಷನ್ ಆಗುವುದು. ನನಗೆ ಯಾವ ಆತಂಕವೂ ಇಲ್ಲ. ಹೀಗಾಗಿ ನಾನು ಕೂಲ್ ಆಗಿ ಇದ್ದೇನೆ. ಅದು ಕೂಡ ನನ್ನ ಆರೋಗ್ಯದ ಗುಟ್ಟು. ಜನರು ಪ್ರೀತಿಯಿಂದ ಮತ್ತೆ ಮತ್ತೆ ಸ್ಪರ್ಧೆ ಮಾಡಿ ಎಂದು ಕೇಳಿದರು. ಆದರೆ, ನಾನು ನಿವೃತ್ತಿಗೆ ತೀರ್ಮಾನ ಮಾಡಿದ್ದೇನೆ ಎಂದು ಹೇಳಿದ್ದಾರೆ.